ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ !
ಚಿಕ್ಕಮಗಳೂರು : ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆಯೊಬ್ಬರು ಬಲಿಯಾದ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಇಂದು ಬೆಳಿಗ್ಗೆ ವೀಣಾ ಅವರು ತೋಟಕ್ಕೆ ಕೆಲಸಕ್ಕೆ ಹೋಗುವಾಗ ದಾಳಿ ನಡೆಸಿದೆ ಪರಿಣಾಮ ಗಂಭೀರ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆನೆಗಳನ್ನ ಓಡಿಸುವಂತೆ ಪ್ರತಿಭಟನೆ ನಡೆಸಿದ ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಸ್ಥಳಕ್ಕೆ ಆಲ್ದೂರು ಅರಣ್ಯ ಇಲಾಖೆಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.