ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರ ಪ್ರೋತ್ಸಾಹ ಅಗತ್ಯ

0 128

ಸೊರಬ : ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರೂ ಪ್ರೋತ್ಸಾಹ ನೀಡಬೇಕು ಎಂದು ವಕೀಲ ವೈ.ಜಿ ಪುಟ್ಟಸ್ವಾಮಿ ನುಡಿದರು.

ಚಂದ್ರಗುತ್ತಿ ಶ್ರೀ ರೇಣುಕಾಂಬ ಸಭಾಭವನದಲ್ಲಿ ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ, ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದಲ್ಲಿ ಹಮ್ಮಿಕೊಂಡಿದ್ದ 8ನೇ ವರ್ಷದ 7ನೇ ದಿನದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಶ್ರೀ ರೇಣುಕಾ ದೇವಿ ನೆಲೆಸಿರುವ ಚಂದ್ರಗುತ್ತಿ ಕ್ಷೇತ್ರಕ್ಕೆ ತನ್ನದೇ ಆದ ಇತಿಹಾಸವಿದ್ದು. ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಭಾಗಗಳಿಂದ ದೇವಿ ದರ್ಶನಕ್ಕೆ ಆಗಮಿಸುತ್ತಾರೆ. ದೇವಾನು ದೇವತೆಗಳ ಕಾಲದಿಂದಲೂ ವೈಶಿಷ್ಟವಾದ ಮಹತ್ವವಿರುವ ಕ್ಷೇತ್ರವು ಅಭಿವೃದ್ಧಿಯಾಗಬೇಕು ಎಂದರು.

ಬೆನ್ನೂರು ಗ್ರಾಪಂ ಮಾಜಿ ಅಧ್ಯಕ್ಷ ಮಾರ್ಯಪ್ಪ ಮಾತನಾಡಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಮಹಿಳಾ ಕಲಾವಿದರು ನಾಟಕ ಪ್ರದರ್ಶಿಸಿದ್ದು ಸಂಭ್ರಮವಾಗಿತ್ತು. ಹಾಗಾಗಿ ಚಂದ್ರಗುತ್ತಿ ಗ್ರಾಮೀಣ ಭಾಗದಲ್ಲಿ ಅನೇಕ ಕಲಾವಿದರಿದ್ದು ಅಂತಹವರಿಗೆ ಅವಕಾಶ ನೀಡುವುದರ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಕೀಲ ವೈಜಿ ಪುಟ್ಟಸ್ವಾಮಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಡಾ.ಆರ್ ಶ್ರೀಧರ್ ಹುಲ್ತಿಕೊಪ್ಪ ವಹಿಸಿದ್ದರು. ತಾಪಂ ಮಾಜಿ ಸದಸ್ಯ ನಾಗರಾಜ ಚಿಕ್ಕಸವಿ, ಹರೀಶಿ ಗ್ರಾಪಂ ಉಪಾಧ್ಯಕ್ಷ ಕುಮಾರ್ ಕೋಡಂಬಿ, ಯಾಷ್ವಂತಪ್ಪ ಮಾಸ್ತರ್, ಡಾ.ಹರ್ಷ, ಗೋಪಾಲ್ ಪೂಜಾರ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮನುಷ್ಯರು ಇತರರ ಮೇಲೆ ಪರಸ್ಪರ ದ್ವೇಷ, ಅಸೂಯೆ ಬಿಟ್ಟು ಪ್ರೀತಿ ವಿಶ್ವಾಸದಿಂದ ಬದುಕಬೇಕು, ಈಗಿನ ದಿನಗಳಲ್ಲಿ ಸಾವು, ನೋವಿನ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಮತ್ತು ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಜನರ ಜೊತೆಯಲ್ಲಿ ಬೆರೆತಾಗ ಮನಸ್ಸಿಗೆ ಸುಖ, ಶಾಂತಿ ದೊರೆಯುತ್ತದೆ.
– ಡಾ. ಹರ್ಷ ಶಿವಕೃಪಾ ಕ್ಲಿನಿಕ್ ಚಂದ್ರಗುತ್ತಿ

Leave A Reply

Your email address will not be published.

error: Content is protected !!