ಅನುದಾನ ಸಮರ್ಪಕ ಬಳಕೆಗೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಸೂಚನೆ

0 38

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ ಮಂಜೂರಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಸುವಂತೆ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅಧಿಕಾರಿಗಳಿಗೆ ಸೂಚಿಸಿದರು.


ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಇಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಕೊನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಾಂಗಕ್ಕಾಗಿ ಮಂಜೂರಾಗಿರುವ ಶೇ. 100 ರಷ್ಟು ಅನುದಾನ ಬಳಕೆಯಾಗಬೇಕು, ಮಂಜೂರಾಗಿರುವ ಅನುದಾನ ಸಮರ್ಪಕವಾಗಿ ಬಳಸದೇ ವಾಪಸ್ ಹೋಗಬಾರದು ಎಂದ ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳು ಮಂಜೂರಾಗಿರುವ ಅನುದಾನಕ್ಕೆ ಸಂಬಂಧಿಸಿದಂತೆ ಆಯಾ ಸ್ಥಾಯಿ ಸಮಿತಿ ಮತ್ತು ಸಾಮಾನ್ಯ ಸಭೆಗಳಲ್ಲಿ ಕ್ರಿಯಾ ಯೋಜನೆಗಳಿಗೆ ಮಂಜೂರಾತಿ ಪಡೆಯಬೇಕು. ನಿಗಧಿತ ಅವಧಿಯೊಳಗೆ ಯೋಜನೆಗಳ ಅನುಷ್ಠಾನ ಮತ್ತು ಫಲಾನುಭವಿಗಳಿಗೆ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ಈ ಜನಾಂಗಕ್ಕೆ ವಿತರಿಸಲಾಗುವ ಜಮೀನು ವಿವಿಧ ಕೊಳವೆ ಬಾವಿ ಸೌಲಭ್ಯ ಮೂಲ ಸೌಕರ್ಯ ಉದ್ಯಮ ಶೀಲತಾ ತರಬೇತಿ ಸ್ವಯಂ ಉದ್ಯೋಗ ಕಾರ್ಯಕ್ರಮಗಳು ವಿವಿಧ ಪರಿಕರಗಳ ವಿತರಣೆ ಸೇರಿದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ತಿಳಿಸಿದರು.


ಜಿಲ್ಲೆಯಲ್ಲಿ ಒಟ್ಟು138 ಪರಿಶಿಷ್ಟ ಜಾತಿ, ಪರಿಶಿಷ್ಟ ಜನಾಂಗದ ನೊಂದ ಸಂತ್ರಸ್ಥರಿಗೆ ಒಟ್ಟು ರೂ. 145 ಲಕ್ಷ ಪರಿಹಾರ ಧನವನ್ನು ವಿತರಿಸಲಾಗಿದೆ. ಉಳಿದ 5 ಪ್ರಕರಣಗಳಲ್ಲಿನ ಸಂತ್ರಸ್ಥರಿಗೆ ಪರಿಹಾರ ಧನ ಮಂಜೂರು ಮಾಡಲು ಕ್ರಮವಹಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಸೂಚಿಸಿದರು.
ತಾಲ್ಲೂಕುಗಳಲ್ಲಿ ನಿಗಧಿತ ಸಮಯಕ್ಕೆ ನಿಯಮಿತವಾಗಿ ಜಾಗೃತಿ ಹಾಗೂ ಉಸ್ತುವಾರಿ ಸಭೆಗಳನ್ನು ನಡೆಸಬೇಕು, ಸಭೆಗಳನ್ನು ನಡೆಸುವುದರಿಂದ ನಿವೇಶನ, ರಸ್ತೆ, ಸ್ಮಶಾನ ಭೂಮಿ ಮಂಜೂರು, ದೌರ್ಜನ್ಯ ಪ್ರಕರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ತಳಮಟ್ಟದಲ್ಲಿಯೇ ಪರಿಹರಿಸಬಹುದಾಗಿದೆ, ಸಮಸ್ಯೆಗಳಿರುವ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಕೂಲಂಕುಷವಾಗಿ ಪರಿಶೀಲಿಸಿ ಪರಿಹರಿಸಲು ಕ್ರಮವಹಿಸ ಬೇಕು ಎಂದರು.


ಸ್ಮಶಾನ ಭೂಮಿ ಮಂಜೂರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರ ಜಮೀನುಗಳಿಗೆ ರಸ್ತೆ ಹಾಗೂ ವಸತಿ ರಹಿತರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಅಥವಾ ಆಶ್ರಯ ನಿವೇಶನ ಹಕ್ಕು ಪತ್ರ ವಿತರಣೆಗೆ ಕ್ರಮವಹಿಸುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ವರ್ಗಾವಣೆಗೊಂಡಿರು ಜಿಲ್ಲಾಧಿಕಾರಿಗಳ ಕೊನೆಯ
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಚೈತ್ರಾಶಿವಾನಂದ್, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Leave A Reply

Your email address will not be published.

error: Content is protected !!