ಅಂಬೇಡ್ಕರ್ ಜಯಂತಿಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನ

0
82

ಚಿಕ್ಕಮಗಳೂರು: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಿಜೆಪಿ ಸರ್ಕಾರ ಮುಂದಾಗದಿರುವುದರಿಂದ ಸರ್ಕಾರ ಹಮ್ಮಿಕೊಳ್ಳುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಿಂದ ಹೊರಗುಳಿಯಲು, ಅಂಬೇಡ್ಕರ್ ಪ್ರತಿಮೆಗೆ ಆ ಪಕ್ಷದ ಮುಖಂಡರು ಮಾಲಾರ್ಪಣೆ ಮಾಡದಂತೆ ತಡೆಯಲು ಬಿಎಸ್ಪಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ಮುಂದಾಗಿವೆ.

ಸುದ್ದಿಗೋಷ್ಟಿಯಲ್ಲಿ ಇಂದು ಮಾತನಾಡಿದ ಬಿಎಸ್ಪಿ ತಾಲೂಕು ಅಧ್ಯಕ್ಷ ಹರೀಶ್, ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಮೊದಲು ಜಿಲ್ಲಾಪಂಚಾಯಿತಿ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುತ್ತಿದೆ. ಸ್ಥಳೀಯ ಶಾಸಕರು ಅಥವಾ ಜಿಲ್ಲಾ ಉಸ್ತುವಾರಿ ಸಚಿವರ ಮಾಲಾರ್ಪಣೆಗೆ ಮುಂದಾದರೆ ಕಪ್ಪುಬಾವುಟ ಪ್ರದರ್ಶಿಸಿ ಅವರನ್ನು ತಡೆಯಲಾಗುವುದು ಎಂದು ತಿಳಿಸಿದರು.

ಈಗಾಗಲೇ ನಡೆದಿರುವ ಒಂದು ಸುತ್ತಿನ ಮಾತುಕತೆಯಲ್ಲಿ ಅಂಬೇಡ್ಕರ್ ಜಯಂತಿಗೆ ವಿರೋಧ ವ್ಯಕ್ತಪಡಿಸಲಾಗದು ಆದರೆ ಗಗನ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ತೀರ್ಮಾನ ಕೈಗೊಂಡಿದ್ದು, ದಲಿತ ಸಮುದಾಯದವರಿಗೆ ಕಾರ್ಯಕ್ರಮದಲ್ಲಿ ತೆರಳದಂತೆ ಮನವರಿಕೆಮಾಡಿಕೊಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಫೆ. 19 ರಂದು 1 50 ಲಕ್ಷ ಜನರು ನಡೆದ ಬೃಹತ್‍ಪ್ರತಿಭಟನೆಯಲ್ಲಿ ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದು, ಮನವಿ ಸ್ವೀಕರಿಸಿದ ಮುಖ್ಯಮಂತ್ರಿ ಬಸವರಾಜ್‍ಬೊಮ್ಮಾಯಿ 3 ದಿನದೊಳಗೆ ಸಭೆ ಕರೆಯುವುದಾಗಿ ತಿಳಿಸಿ ಮಾತು ತಪ್ಪಿದ್ದಾರೆಂದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ, ಶಾಸಕ ಸಿ. ಟಿ. ರವಿ ಸೇರಿದಂತೆ ಬಿಜೆಪಿ ಮುಖಂಡರು ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನವಾದಾಗ ದ್ವನಿ ಎತ್ತಲಿಲ್ಲ ಹಾಗಾಗಿ ಅಂಬೇಡ್ಕರ್ ಜಯಂತಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡದಂತೆ ತಡೆಯಲಾಗುವುದು ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾಸಂಚಾಲಕ ಕಬ್ಬಿಗೆರೆ ಮೋಹನ್‍ಕುಮಾರ್ ಮಾತನಾಡಿ, ಬಿಜೆಪಿ ನೇತೃತ್ವದ ರಾಜ್ಯಸರ್ಕಾರಕ್ಕೆ ಅಂಬೇಡ್ಕರ್ ಜಯಂತಿ ಆಚರಿಸಲು ನೈತಿಕತೆ ಇಲ್ಲವಾಗಿದೆ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮುಂದಾದರೆ ಅದನ್ನು ಪ್ರತಿಭಟಿಸಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ತಿಳಿಸಿದರು.

ದಸಂಸ ನಾಗವಾರಬಣದ ತಾಲೂಕು ಸಂಚಾಲಕ ಟಿ. ಎಲ್. ಗಣೇಶ್ ಮಾತನಾಡಿ, ಬಿಎಸ್ಪಿ ಸೇರಿದಂತೆ ದಲಿತ ಸಂಘಟನೆ ಹಾಗೂ ಪ್ರಗತಿಪರ ಸಂಘಟನೆಗಳು ಸರ್ಕಾರ ಆಚರಿಸುವ ಅಂಬೇಡ್ಕರ್ ಜಯಂತಿಕಾರ್ಯಕ್ರಮದಲ್ಲಿ ಭಾಗವಹಿಸದಿರಲು ನಿರ್ಧರಿಸಲಾಗಿದೆ ಎಂದರು. ಬಿಎಸ್ಪಿ ಮುಖಂಡರಾದ ವಸಂತ, ನವೀನ, ಸೋಮಶೇಖರ್ ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here