24.3 C
Shimoga
Friday, December 9, 2022

ಅತ್ತೆಯ ಸಾವಿನ ಸುದ್ದಿ ಕೇಳಿ ಆಘಾತ ; ಹೃದಯಾಘಾತಕ್ಕೀಡಾಗಿ ಅಳಿಯ ಸಾವು !

ಸಾಗರ: ಅತ್ತೆಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಅಳಿಯ ತೀವ್ರ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ತಾಲೂಕಿನ ಲಿಂಗನಮಕ್ಕಿಯಲ್ಲಿ ಭಾನುವಾರ ನಡೆದಿದೆ.


ಸಹೋದರತ್ತೆ ಲಕ್ಷ್ಮಮ್ಮ(58) ಎಂಬುವವರನ್ನು ಅಳಿಯ ಗುಲ್ಫತ್ ಸಿಂಗ್(45) ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಹೊರಡುವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳಿಸಿಕೊಟ್ಟಿದ್ದರು. ಈ ಬಸ್ ಆನಂದಪುರ ಸಮೀಪ ಹೋಗುತ್ತಿದ್ದಾಗ ಅತ್ತೆ ಲಕ್ಷ್ಮಮ್ಮನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ನಿರ್ವಾಹಕ ಲಕ್ಷ್ಮಮ್ಮ ಸಂಬಂಧಿಕರಿಗೆ ಕರೆ ಮಾಡಿ ಮೃತಪಟ್ಟ ಸುದ್ದಿ ತಿಳಿಸಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಶಾಕ್ ಆದ ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಅವರಿಗೂ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!