ಅಧಿಕೃತ ಕರ್ನಾಟಕ ದಸಂಸ ಹೆಸರು ದುರ್ಬಳಕೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಪೊಲೀಸ್ ಠಾಣೆಯಲ್ಲಿ ದೂರು !

0
742

ಹೊಸನಗರ: ಅಧಿಕೃತ ದಲಿತ ಸಂಘರ್ಷ ಸಮಿತಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಪತ್ರಿಕಾಗೋಷ್ಠಿ ನಡೆಸಿ ಹೊಸನಗರದ ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರ ನಾಯ್ಕ ರವರ ವಿರುದ್ಧ ಅಪಪ್ರಚಾರ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಮೂರ್ತಿಯವರು ಹೊಸನಗರದ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ

ದೂರಿನಲ್ಲಿ 2021ರ ಅ. 11ರಂದು ಹೊಸನಗರದ ಪ್ರವಾಸಿ ಮಂದಿರದಲ್ಲಿ ಉಮೇಶ, ಲಕ್ಷ್ಮಣ ಸಾಗರ್, ಗುರುರಾಜ್ ಸೊರಬ, ರವಿ ಜಂಬಗಾರು, ಬಂಗಾರಮ್ಮ, ಸುರೇಶ, ಹರೀಶ, ಶ್ಯಾಮ ಚಂದ್ರಪ್ಪ ಮತ್ತಿತರರು ಪತ್ರಿಕಾಗೋಷ್ಠಿ ನಡೆಸಿ ಹೊಸನಗರದ ಸೊಪ್ಪಿನಮಲ್ಲೆಯ ದಲಿತ ಮಹಿಳೆ ಮೇಲೆ ಹಲ್ಲೆ ಮಾಡಿರುವ ಹೊಸನಗರದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ರಾಜೇಂದ್ರನಾಯ್ಕ್ ರವರನ್ನು ಸೇವೆಯಿಂದ ಅಮಾನತು ಗೊಳಿಸಬೇಕೆಂದು ಒತ್ತಾಯಿಸಿ 2021ರ ಅ.13 ರಂದು ಹೊಸನಗರದ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಧರಣಿ ನಡೆಸಲಾಗುವುದೆಂದು ಹೇಳಿದ್ದಾರೆ.

ಅಧಿಕೃತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರು ಮತ್ತು ನೋದಣಿ ಸಂಖ್ಯೆ 47/74-75ನ್ನು ಯಾರು ಬಳಸಬಾರದೆಂದು 2021ರ ಮಾ.24 ರಂದು ಭದ್ರಾವತಿಯ ಮಾನ್ಯ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ ಪರ್ಮನೆಂಟ್ ಇಂಜೆಕ್ಷನ್ ನೀಡಿ ತೀರ್ಪು ನೀಡಿರುತ್ತದೆ. ವಸ್ತು ಸ್ಥಿತಿ ಹೀಗಿದ್ದರೂ ಸಹ ಮೇಲ್ಕಂಡವರು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸಾರ್ವಜನಿಕರು ಮತ್ತು ಸರ್ಕಾರಿ ಅಧಿಕಾರಿಗಳನ್ನು ವಂಚಿಸುತ್ತಿರುವುದು ಸಮಿತಿಯ ಗಮನಕ್ಕೆ ಬಂದಿರುತ್ತದೆ ಆದ್ದರಿಂದ ಯಾರೆ ದಲಿತ ಸಂಘರ್ಷ ಸಮಿತಿಯ ಹೆಸರನ್ನು ಹೇಳಿಕೊಂಡು ಪತ್ರಿಕಾಗೋಷ್ಠಿ ನಡೆಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here