ಅನರ್ಹ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಜಿಲ್ಲಾಧಿಕಾರಿ ಸೂಚನೆ

0
551

ಚಿಕ್ಕಮಗಳೂರು: ಆರ್ಥಿಕವಾಗಿ ಉತ್ತಮ ಸ್ಥಿತಿಯಲ್ಲಿರುವವರು ಸುಳ್ಳು ಮಾಹಿತಿ ನೀಡಿ ಪಡೆದಿರುವ ಎಎವೈ ಹಾಗೂ ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಸೂಚಿಸಿದ್ದಾರೆ.

ಎಎವೈ ಹಾಗೂ ಬಿಪಿಎಲ್ ಪಡಿತರ ಕಾರ್ಡ್‌ಗಳನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸದೃಢ ಕುಟುಂಬಗಳ ಪಡಿತರ ರದ್ದುಪಡಿಸಲು ಆದೇಶಿಸಿದೆ.

ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ನಿಗಮ,ಮಂಡಳಿಗಳು ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ ಒಂದು ಸಾವಿರ ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಸ್ವಂತ ಮನೆಯನ್ನು ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಹಾಗೂ ಕುಟುಂಬದ ವಾರ್ಷಿಕ ಆದಾಯವು ರೂ.1,20000 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಕಾರ್ಡ್‌ಗಳನ್ನು ಹಿಂದುರುಗಿಸಬೇಕು.

ಜಿಲ್ಲೆಯಲ್ಲಿ 2011 ಜನಗಣತಿಯಂತೆ 276085 ಕುಟುಂಬಗಳು ದಾಖಲಾಗಿದ್ದು, 2031೨೦೨೧ ಮಾರ್ಚ್ ಮಾಹೆಯವರೆಗೆ 22409 ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು 245730 ಆದ್ಯತಾ (ಬಿಪಿಎಲ್) ಸೇರಿ ಒಟ್ಟು 268136 ಕುಟುಂಬಗಳಿಗೆ ಆದ್ಯತಾ (ಎಎವೈ+ಬಿಪಿಎಲ್) ಪಡಿತರ ಚೀಟಿ ನೀಡಲಾಗಿದೆ ಜೊತೆಗೆ 55372 ಕುಟುಂಬಗಳಿಗೆ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಆರ್ಥಿಕವಾಗಿ ಸದೃಢರಾದ ಮತ್ತು ಇತರೆ ಅನರ್ಹರು ಹೊಂದಿರುವ ಅಂತ್ಯೋದಯ ಅನ್ನ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಲು ಪದೇ ಪದೇ ಮನವಿ ಮಾಡಲಾಗಿದ್ದರೂ ಕೂಡ ಇದುವರೆಗೂ ಸಾಕಷ್ಟು ಕುಟುಂಬಗಳು ಅನರ್ಹ ಪಡಿತರ ಚೀಟಿಗಳನ್ನು ಹಿಂದಿರುಗಿಸಿರುವುದಿಲ್ಲ.

ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೇ ತಾಲ್ಲೂಕಿನ ತಹಸೀಲ್ದಾರರಿಗೆ ಒಪ್ಪಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿ ಪಡೆಯಲು ತಿಳಿಸಿದೆ. ತಪ್ಪಿದಲ್ಲಿ ಆಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಹಾಗೂ ಹಂಚಿಕೆ ಪಡೆದ ಆಹಾರ ಧಾನ್ಯಗಳ ಬಾಬ್ತು ಮುಕ್ತ ಮಾರುಕಟ್ಟೆ ದರದಂತೆ ಮೊಬಲಗನ್ನು ದಂಡದ ರೂಪದಲ್ಲಿ ವಸೂಲು ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here