ತೀರ್ಥಹಳ್ಳಿ: ಕಟ್ಟೆಹಕ್ಕಲು ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ವೆಂಕಟೇಶ್ ಎಂ (51) ರವರು ಕಚೇರಿ ಕೆಲಸದ ನಿಮಿತ್ತ ಬೈಕಿನಲ್ಲಿ ಹೋಗುತ್ತಿರುವಾಗ ಮಾರುತಿ ಓಮ್ನಿ ಮತ್ತು ಬೈಕ್ ನಡುವೆ ನಾಗರವಳ್ಳಿ ಸಮೀಪದ ರಸ್ತೆ ತಿರುವಿನಲ್ಲಿ ಮುಖಾಮುಖಿಯಾಗಿ ಗಂಭೀರವಾಗಿ ಗಾಯಗೊಂಡ ವೆಂಕಟೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಅವರ ಮೃತದೇಹವನ್ನು ತೀರ್ಥಹಳ್ಳಿ ಸರ್ಕಾರಿ ಜೆಸಿ ಆಸ್ಪತ್ರೆಯಲ್ಲಿ ಇಡಲಾಗಿದ್ದು ತೀರ್ಥಹಳ್ಳಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಸುದ್ದಿ ತಿಳಿದ ತಕ್ಷಣ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಜೆಸಿ ಆಸ್ಪತ್ರೆಗೆ ಧಾವಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸಲ್ಲಿಸಿದ್ದಾರೆ.
