ಅಪಘಾತವಾಗಿರುವ ಕಾರಿನಲ್ಲಿದ್ದವರನ್ನು ಬೆದರಿಸಿ ದರೋಡೆ !

0
399

ಮೂಡಿಗೆರೆ: ಚಾರ್ಮಾಡಿ ಘಾಟಿಯಲ್ಲಿ ಅಪಘಾತವಾಗಿದ್ದ ವಾಹನದಲ್ಲಿದ್ದ ಪ್ರಯಾಣಿಕರನ್ನು ಬೆದರಿಸಿ ಹಣ, ಉಂಗುರ ಹಾಗೂ ಮೊಬೈಲ್‌ನ್ನು ಕಸಿದುಕೊಂಡು ಹೋಗಿರುವ ಘಟನೆ ವರದಿಯಾಗಿದೆ.

ಬೆಂಗಳೂರಿನ ದೇವನಹಳ್ಳಿಯ ಮದುಸೂದನ್ ಎಂಬುವವರು ಬಣಕಲ್ ಠಾಣೆಗೆ ದೂರು ನೀಡಿ ಪ್ರಕರಣ ದಾಖಲಿಸಿರುವ ಅವರು, ಇದೆ ತಿಂಗಳು 3 ರಂದು ದೇವನಹಳ್ಳಿಯಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಕಾರಿನಲ್ಲಿ ದಕ್ಷಿಣ ಕನ್ನಡದ ಕಡೆಗೆ ಹೋಗುತ್ತಿರುವಾಗ ಚಾರ್ಮಾಡಿ ಘಾಟ್‌ನಲ್ಲಿ ರಾತ್ರಿ 12.30ರ ಸುಮಾರಿಗೆ ರಸ್ತೆ ಬದಿಯ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಣ್ಣ ಗಾಯಗಳಾಗಿದ್ದು ಅಂಬುಲೆನ್ಸ್ ಗೆ ಕರೆ ಮಾಡಲು ನೆಟ್‌ವರ್ಕ್ ಇಲ್ಲದೆ ಇರುವುದರಿಂದ ಕಾರಿನಲ್ಲೆ ಕುಳಿತ್ತಿದ್ದಾಗ ಧರ್ಮಸ್ಥಳದಿಂದ ಮೂಡಿಗೆರೆ ಕಡೆಗೆ ಬೈಕ್ ಮತ್ತು ಸ್ಕೂಟರ್ ನಲ್ಲಿ ಬಂದ ಮೂವರು ಯುವಕರ ತಂಡ ಕಾರನ್ನು ಸುತ್ತುವರಿದು 600 ರೂಪಾಯಿ ಹಣ, ಮೊಬೈಲ್ ಹಾಗೂ ಉಂಗುರವನ್ನು ಕಸಿದುಕೊಂಡು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬಣಕಲ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here