ಅಪ್ಪ ಮೃತಪಟ್ಟಿರುವ ನೋವಿನಲ್ಲೆ SSLC ಪರೀಕ್ಷೆ ಬರೆದ ವಿದ್ಯಾರ್ಥಿ !

0
489

ಕಡೂರು : ಅಪ್ಪನ ಸಾವಿನ ನೋವಲ್ಲೂ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಪರೀಕ್ಷೆಗೆ ಹಾಜರಾಗಿರುವ ಕರುಣಾಜನಕ ಘಟನೆ ತಾಲ್ಲೂಕಿನ ಗೆದ್ಲೆಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಡೂರು ತಾಲ್ಲೂಕಿನ ಗೆದ್ಲೆಹಳ್ಳಿ ಗ್ರಾಮದ ಲಿಖಿತ ಕಡೂರು ಪಟ್ಟಣದ ಬಿ.ಜಿ.ಎಸ್. ಪ್ರೌಢ ಶಾಲೆಯಲ್ಲಿ ಓದುತ್ತಿದ್ದ. ತಂದೆ 41 ವರ್ಷದ ಸಂತೋಷ್ ಅನಾರೋಗ್ಯದ ಹಿನ್ನೆಲೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಶುಕ್ರವಾರ ಅಪ್ಪನ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿರುವಾಗಲೇ ಆ ನೋವಿನಲ್ಲೂ ಲಿಖಿತ್ ಕಡೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದಾನೆ.

ಜಾಹಿರಾತು

LEAVE A REPLY

Please enter your comment!
Please enter your name here