20.6 C
Shimoga
Friday, December 9, 2022

ಅಪ್ರಾಪ್ತನಿಂದ ಸಂಚಾರಿ ನಿಯಮ ಉಲ್ಲಂಘಿಸಿ ಬೈಕ್ ಚಾಲನೆ ; ಅವಕಾಶ ನೀಡಿದ ಬೈಕ್ ಮಾಲೀಕ ಬಾಲಕನ ತಂದೆಗೆ ₹ 25 ಸಾವಿರ ದಂಡ !

ತೀರ್ಥಹಳ್ಳಿ : ಅಪ್ರಾಪ್ತ ವಯಸ್ಸಿನ ಬಾಲಕ ಸಂಚಾರಿ ನಿಯಮ ಉಲ್ಲಂಘಿಸಿ ಬೈಕ್ ಚಾಲನೆ ಮಾಡಿದ್ದು ಬೈಕ್ ಮಾಲೀಕ ಬಾಲಕನ ತಂದೆಗೆ 25 ಸಾವಿರ ರೂ. ದಂಡ ವಿಧಿಸಲಾಗಿದೆ.

ಘಟನಾ ವಿವರ :

ಅ.18 ರಂದು ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ವಿನಾಯಕ ಟಾಕೀಸ್ ನ ರಸ್ತೆಯಲ್ಲಿ, 16 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನು ಕೆಎ-14 ಇಆರ್-1884 ನೋಂದಣಿ ಸಂಖ್ಯೆಯ ಬೈಕ್ ಅನ್ನು ಹೆಲ್ಮೆಟ್ ಧರಿಸದೇ ಮತ್ತು ವಾಹನ ಚಾಲನಾ ಪರವಾನಿಗೆಯನ್ನು ಹೊಂದಿರದೇ ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಬೈಕ್ ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಆತನ ತಂದೆ ತೀರ್ಥಹಳ್ಳಿ ಟೌನ್ ನಿವಾಸಿ ಆಸಿಫ್ ಬಾಷಾ (46) ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ನೀಡಿದ್ದು, ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ತೀರ್ಥಹಳ್ಳಿಯ ನ್ಯಾಯಾಧೀಶರು ಬೈಕ್ ಮಾಲೀಕರಾದ ಬಾಲಕನ ತಂದೆ ಆಸಿಫ್ ಬಾಷಾ ರವರಿಗೆ ರೂ 25 ಸಾವಿರ ರೂ. ದಂಡ ವಿಧಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!