ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಪೊಲೀಸ್ ಠಾಣೆಯ ಲಾಕಪ್‌ನ ಚಿಲಕ ತೆಗೆದು ಪರಾರಿ !

0
2770

ಎನ್.ಆರ್.ಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಬಂಧನಕ್ಕೊಳಗಾಗಿದ್ದ ಆರೋಪಿಯೊಬ್ಬ ಪೊಲೀಸ್ ಠಾಣೆಯ ಲಾಕಪ್‌ನ ಚಿಲಕ ತೆಗೆದು ಪರಾರಿಯಾಗಿರುವ ಘಟನೆ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ.

ನಿಜಾಮ್ (26) ಪರಾರಿಯಾಗಿರುವ ಆರೋಪಿಯಾಗಿದ್ದು, 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಯತ್ನದ ಆರೋಪಕ್ಕೆ ಸಂಬಂಧಿಸಿದಂತೆ ನಿಜಾಮ್ ನನ್ನು ಪೊಲೀಸರು ಬಂಧಿಸಿ ಠಾಣೆಯ ಸೆಲ್ ನಲ್ಲಿರಿಸಿದ್ದರು. ಆದರೆ ಠಾಣೆಯಲ್ಲಿ ಸಿಬ್ಬಂದಿಗಳು ಇಲ್ಲದ ಸಮಯ ನೋಡಿ ಆರೋಪಿ ನಿಜಾಮ್ ಲಾಕಪ್‌ನ ಚಿಲಕ ತೆಗೆದು ಎಸ್ಕೇಪ್ ಆಗಿದ್ದಾನೆ.

ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಠಾಣೆಯಿಂದಲೇ ಪರಾರಿಯಾಗಿರುವ ಆರೋಪಿಯನ್ನು ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here