ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 23ರ ಯುವಕನಿಗೆ ಪೋಕ್ಸೋ ಕಾಯ್ದೆಯಡಿ 20 ವರ್ಷ ಕಠಿಣ ಶಿಕ್ಷೆ ಜೊತೆಗೆ 60 ಸಾವಿರ ರೂ. ದಂಡ !

0
896

ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ 23 ವರ್ಷದ ಯುವಕನಿಗೆ ಪೋಕ್ಸೋ ಕಾಯ್ದೆಯಡಿ 20 ವರ್ಷ ಕಠಿಣ ಶಿಕ್ಷೆ ಜೊತೆಗೆ 60 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

ಘಟನಾ ವಿವರ :

2021ರ ಜೂ.29 ರಂದು ಸಂಜೆ ಆಗುಂಬೆ ಪೊಲೀಸ್‌ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತೆ ಮೇಲೆ ಮಕ್ಸೂದ್‌ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯವೆಸಗಿರುತ್ತಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಆಗಿನ ತನಿಖಾಧಿಕಾರಿಗಳಾದ ತೀರ್ಥಹಳ್ಳಿ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಕೈಗೊಂಡು ಈ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ರವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದು, The Addl District and Sessions Court, FTSC–II (POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಮೋಹನ ಜೆ.ಎಸ್ ರವರು ಇಂದು ಆರೋಪಿ ಮೊಹಮ್ಮದ್‌ ಮಕ್ಸೂದ್‌ ಎಂ.ಹೆಚ್‌ (23) ಈತನ ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಈತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60 ಸಾವಿರ ರೂ. ದಂಡ, ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here