ಅಮೃತ ಕಾಲೇಜಿನಲ್ಲಿ ಮತದಾರರ ದಿನಾಚರಣೆ | “ಮತದಾನದ ಹಕ್ಕು ಪವಿತ್ರವಾದ ಹಕ್ಕು” ; ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ

0
550

ರಿಪ್ಪನ್‌ಪೇಟೆ : ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪವಿತ್ರವಾದ ಹಕ್ಕಾಗಿದೆ. ಮತದಾನದ ಹಕ್ಕನ್ನು ಹೊಂದಿರುವ ಪ್ರತಿಯೊಬ್ಬರು ಮತದಾನ ಮಾಡುವುದರ ಮೂಲಕ ತಮಗೆ ಸಿಕ್ಕಿರುವ ಹಕ್ಕನ್ನು ಚಲಾಯಿಸಬೇಕು ಎಂದು ಪ್ರಾಚಾರ್ಯ ಮಹಮ್ಮದ್ ನಜಹತ್ ಉಲ್ಲಾ ಹೇಳಿದರು.

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕಿನ ಅವಕಾಶ ಲಭಿಸಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾಯಿತ ಪ್ರತಿನಿಧಿಗಳು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದರಿಂದ ಅವರುಗಳ ಆಯ್ಕೆ ಉತ್ತಮವಾಗಿರಲಿ ಎಂದು ನಮ್ಮ ಸಂವಿಧಾನ ಮತದಾನದ ಹಕ್ಕನ್ನು ನೀಡಿದೆ ಎಂದರು.

ರಾಜ್ಯಶಾಸ್ತ್ರದ ಉಪನ್ಯಾಸಕ ಶಂಕ್ರಪ್ಪ ಮತದಾರರ ದಿನಾಚರಣೆ ಕುರಿತು ಉಪನ್ಯಾಸ ನೀಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಸ್ವತಂತ್ರ ರಾಷ್ಟ್ರಗಳಲ್ಲಿ ಮತದಾನದ ಮೂಲಕ ಚುನಾಯಿತ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅವಕಾಶವನ್ನು ನೀಡಿದ ಮೊದಲ ರಾಷ್ಟ್ರ ಭಾರತವಾಗಿದೆ. ನಮ್ಮ ದೇಶದಲ್ಲಿ ರಚಿತವಾದ ಸಂವಿಧಾನವು ದೇಶದ ನಾಗರಿಕರಿಗೆ ಮತದಾನದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ನೀಡಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಹಾಲಪ್ಪ ಸಂಕೂರು, ರಾಜು ಶಿವಪುರ, ಸತೀಶ್, ಶಾಂತ, ನಿತ್ಯಶ್ರೀ, ಮಧು, ಪ್ರಕಾಶ್, ಸಬಾಸ್ಟಿನ್ ಮ್ಯಾಥ್ಯೂಸ್, ಸಿಬ್ಬಂದಿ ರಾಘು ಇತರರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here