ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0
573

ರಿಪ್ಪನ್‌ಪೇಟೆ : ಅಮೃತ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬುಧವಾರ ಆಚರಿಸಲಾಯಿತು.

ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಮಹ್ಮದ್ ನಜಾಹತ್ ಉಲ್ಲಾ, ಜಗತ್ತಿಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ ದಂತಹ ಮಹಾನ್ ಕೃತಿ ರಾಮಾಯಣದ ಮೂಲಕ ಸಮಾಜದಲ್ಲಿನ ನಾಗರಿಕರ ಬದುಕಿನ ಬಗ್ಗೆ ಸ್ಪಷ್ಟ ಚಿತ್ರಣವನ್ನು ನೀಡಿದಂತಹ ಮಹಾನ್ ವ್ಯಕ್ತಿಯಾಗಿದ್ದರು. ಶ್ರೀ ಮಹರ್ಷಿ ವಾಲ್ಮೀಕಿ ಅವರು ನೀಡಿದಂತಹ ಮಾನವೀಯ ಮೌಲ್ಯಗಳ ತತ್ವಗಳನ್ನು ಮತ್ತು ಆದರ್ಶಗಳನ್ನು ನಾವುಗಳು ಅಳವಡಿಸಿಕೊಂಡಾಗ ಮಾತ್ರ ಉತ್ತಮ ಸಮಾಜದ ನಿರ್ಮಾಣಕ್ಕೆ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಹಾಲಪ್ಪ ಸಂಕೂರು, ಶಂಕ್ರಪ್ಪ ಕಲ್ಲೂರು, ರಾಜು ಶಿವಪುರ, ಪ್ರಕಾಶ್, ನಾಗೇಶ್ ಸೋಮಯಾಜಿ, ಶಾಂತ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here