24.3 C
Shimoga
Friday, December 9, 2022

ಅರಣ್ಯ ಇಲಾಖೆ ಸಿಬ್ಬಂದಿಗಳ ದಾಳಿ ;
ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ !


ಹೊಸನಗರ: ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್ ವಾಹನಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.


ತಾಲೂಕಿನ ಮುತ್ತಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ದಾಳಿ ಮಾಡಿ, ಕೆಎ-15-3172, ಕೆಎ-15-ಎ-0957, ಕೆಎ-42-2108 ನೋಂದಣಿ ಸಂಖ್ಯೆ ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳಾದ ಈಚಲಕೊಪ್ಪ ಕಿರಣ, ಮುತ್ತಲ ಮಂಜುನಾಥ ಮತ್ತು ರಾಮಚಂದ್ರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.


ವಲಯ ಅರಣ್ಯಾಧಿಕಾರಿ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಉಪವಲಯ ಅರಣ್ಯಾಧಿಕಾರಿಗಳಾದ ಯುವರಾಜ್, ರಾಘವೇಂದ್ರ, ಮಂಜುನಾಥ್, ವಾಹನ ಚಾಲಕರಾದ ಜಗದೀಶ್, ಪ್ರಮೋದ್‌ದಾಳಿಯಲ್ಲಿ ಭಾಗವಹಿಸಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!