ಅರಸಾಳು ಗ್ರಾಮದಲ್ಲಿ ರೈಲು ನಿಲುಗಡೆಗೆ ಒತ್ತಾಯಿಸಿ ಪ್ರತಿಭಟನೆಗೆ ಸಿದ್ಧತೆ

0
393

ರಿಪ್ಪನ್‌ಪೇಟೆ: ಹೊಸನಗರ ತಾಲೂಕಿನ ಏಕೈಕ ರೈಲ್ವೆ ನಿಲ್ದಾಣವಾಗಿರುವ ಅರಸಾಳು ರೈಲ್ವೆ ನಿಲ್ದಾಣದ ಮೂಲಕ ಪ್ರತಿದಿನ 5ಕ್ಕೂ ಅಧಿಕ ರೈಲುಗಳು ಮೈಸೂರು ಹಾಗೂ ಬೆಂಗಳೂರಿನಿಂದ ತಾಳಗುಪ್ಪಕ್ಕೆ ಸಂಚರಿಸುತ್ತಿವೆ. ರೈಲ್ವೆ ನಿಲುಗಡೆಗೆ ಎಲ್ಲಾ ಮೂಲಭೂತ ಸೌಕರ್ಯಗಳಿಂದರೂ ಸಹ ಯಾವ ರೈಲುಗಳು ಅರಸಾಳು ಗ್ರಾಮದಲ್ಲಿ ನಿಲುಗಡೆಯಾಗುತ್ತಿಲ್ಲ. ಆದ್ದರಿಂದ ಈ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ನಿಲುಗಡೆಗೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷ ಹಾಗು ವಿವಿಧ ಸಂಘ ಸಂಸ್ಥೆಗಳು ಸಹಕಾರದೊಂದಿಗೆ ಪ್ರತಿಭಟನೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮೀರ್ ಹಂಜಾ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಂಡಿ ರಾಮಚಂದ್ರ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ತೊರೆಗೆದ್ದೆ ವಾಸಪ್ಪಗೌಡ, ಗ್ರಾಮ ಪಂಚಾಯಿತಿ ಸದಸ್ಯರಾದ ಚಂದ್ರೇಶ್ ಹಾಗೂ ಆಶಿಫ್ ಭಾಷಾ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮಾಜಿ ಮಂತ್ರಿಗಳಾದ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿ ಮಾಡಿದರು.

ಜಾಹಿರಾತು

LEAVE A REPLY

Please enter your comment!
Please enter your name here