ಅರಸಾಳು ವಲಯ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: ಮಾಲು ಸಹಿತ ಮೂವರು ಜಿಂಕೆ ಬೇಟೆಗಾರರ ಬಂಧನ !

0
10938

ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ವಲಯ ಅರಣ್ಯ ವ್ಯಾಪ್ತಿಯ ಆಲವಳ್ಳಿ ಮನ್ನಾಜಂಗಲಿಯಲ್ಲಿ ಬುಧವಾರ ಕಾಡುಪ್ರ‍ಾಣಿ ಜಿಂಕೆಯನ್ನು ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಸಾಳು ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ಪುಟ್ನಲ್ಲಿ ಮಾರ್ಗದರ್ಶನದಲ್ಲಿ ವಲಯ ಅರಣ್ಯ ಅಧಿಕಾರಿ ಬಾಬುರಾಜೇಂದ್ರ ಪ್ರಸಾದ್ ಮತ್ತು ಸಿಬ್ಬಂದಿ ವರ್ಗ ದಿಢೀರ್ ದಾಳಿ ಮಾಡಿ ಮಾಲು ಸಹಿತ ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಾದ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಲಕ್ಕವಳ್ಳಿ ಗ್ರಾಮದ ಪ್ರಶಾಂತ್ (38), ಸಚಿನ್ (20), ಆದರ್ಶ (20) ಎಂದು ಗುರುತಿಸಲಾಗಿದೆ. ಇನ್ನೋರ್ವ ಪರಾರಿಯಾಗಿದ್ದಾನೆಂದು ಹೇಳಲಾಗಿದೆ.

ಈ ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಬಾಬು ರಾಜೇಂದ್ರ ಪ್ರಸಾದ್, ಉಪವಲಯ ಅರಣ್ಯಾಧಿಕಾರಿಗಳಾದ ಮಹೇಶ್, ಚಂದ್ರಶೇಖರ್, ಅರಣ್ಯ ರಕ್ಷಕ ಬಸವರಾಜ್, ಅನಿಲ್ ಇನ್ನಿತರರು ಇದ್ದರು.

ಜಾಹಿರಾತು

LEAVE A REPLY

Please enter your comment!
Please enter your name here