ಆಗುಂಬೆ ಘಾಟ್‌ನಲ್ಲಿ ಪ್ರಪಾತಕ್ಕೆ ಬಿದ್ದ ಲಾರಿ: ನಾಲ್ವರು ಸ್ಥಳದಲ್ಲೇ ಸಾವು ! ಐವರ ಸ್ಥಿತಿ ಗಂಭೀರ

0
8632

ತೀರ್ಥಹಳ್ಳಿ: ತಾಲೂಕಿನಲ್ಲಿರುವ ಆಗುಂಬೆ ಘಾಟ್‌ನ 9ನೇ ತಿರುವಿನಲ್ಲಿ ವ್ಯಾನ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟ 5 ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಮಲೆನಾಡು ಮತ್ತು ಕರಾವಳಿಗೆ ಸಂಪರ್ಕ ಕಲ್ಪಿಸುವ ಕಡಿದಾದ ತಿರುವುಗಳಿರುವ ಆಗುಂಬೆ ಘಾಟಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಮಿಯಾರು ಜೋಡುಕಟ್ಟೆಯ ನಿವಾಸಿಗಳಾದ ಚಾಲಕ ವಿಘ್ನೇಶ್, ಶ್ರೀಜಿತ್, ಮಂಜುನಾಥ ಮತ್ತು ಮಣಿ ಎಂದು ಗುರುತಿಸಲಾಗಿದೆ.

ಗಾಯಗೊಂಡ ಐವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.

ಅಪಘಾತಕ್ಕೀಡಾದ ವಾಹನ ಚಿಕ್ಕಮಗಳೂರಿನ ಕೊಪ್ಪಕ್ಕೆ ಇಂಟರ್ ಲಾಕ್ ಬ್ರಿಕ್ಸ್ ಗಳನ್ನು ಸರಬರಾಜು ಮಾಡಲು ತೆರಳಿ ಮಂಗಳೂರಿನ ಕಡೆಗೆ ವಾಪಾಸಾಗುತ್ತಿತ್ತು ಎನ್ನಲಾಗಿದೆ. ತೀರ್ಥಹಳ್ಳಿಯಿಂದ ಆಗುಂಬೆ ಘಾಟ್ ಮಾರ್ಗದಲ್ಲಿ ಬರುವಾಗ 9ನೇ ತಿರುವಿನಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದಿದೆ. ಪೊಲೀಸರು ಮತ್ತು ಸ್ಥಳೀಯರು ಪ್ರಪಾತದಲ್ಲಿ ಬಿದ್ದಿದ್ದ ವಾಹನದಿಂದ ಮೃತದೇಹಗಳನ್ನು ಹೊರಗೆ ಎಳೆದಿದ್ದಾರೆ. ಉಳಿದವರ ಸ್ಥಿತಿಯೂ ಗಂಭೀರವಾಗಿದ್ದು, ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಗೃಹ ಸಚಿವ ಆರಗ ಸಂತಾಪ:

ಇಂತಹ ಅವಘಡಗಳು ಮರುಕಳಿಸದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಇಂದಿನ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ, ಇತರ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here