24.3 C
Shimoga
Friday, December 9, 2022

ಆದಾಯ ತೆರಿಗೆ ಇಲಾಖೆಗೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ; ದೀಪಕ್ ದೊಡ್ಡಯ್ಯ


ಚಿಕ್ಕಮಗಳೂರು : ಮಾಜಿ ವಿಧಾನಪರಿಷತ್ ಸದಸ್ಯೆ ಹಾಗೂ ಚಿಕ್ಕಮಗಳೂರು ಕಾಂಗ್ರೆಸ್ ಮುಖಂಡರಾದ ಗಾಯತ್ರಿ ಶಾಂತೇಗೌಡ ಅವರ ಮನೆ ಮೇಲೆ ನಡೆದಿರುವ ಐಟಿ ದಾಳಿಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಬಿಜೆಪಿ ಜಿಲ್ಲಾ ವಕ್ತಾರ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದ್ದಾರೆ.


ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಗಾಯತ್ರಿ ಶಾಂತೇಗೌಡ ಅವರ ಮನೆಯ ಮೇಲೆ ನಡೆದಿರುವ ಐಟಿ ದಾಳಿಗೆ ಪ್ರತಿಯಾಗಿ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಸರ್ಕಾರ ಆದಾಯ ತೆರಿಗೆ ವಿಭಾಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ಬಿಜೆಪಿ ಸರ್ಕಾರದ ವಿರುದ್ಧ, ಶಾಸಕ ಸಿ.ಟಿ.ರವಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿರುವುದು ಅವರ ವಿವೇಚನಾರಹಿತ ಪ್ರತಿಭಟನೆಯಾಗಿದೆ. ಆದಾಯ ತೆರಿಗೆ ಇಲಾಖೆಯು ರಾಜ್ಯ ಸರ್ಕಾರದ ಅಧೀನದಲ್ಲಾಗಲಿ ಅಥವಾ ಕೇಂದ್ರ ಸರ್ಕಾರದ ಅಧೀನದಲ್ಲಾಗಲಿ ಇಲ್ಲ ಹಾಗೂ ಅದು ಯಾವುದೇ ಸರ್ಕಾರ ಹೇಳಿದಂತೆ ದಾಳಿ ನಡೆಸುವುದಿಲ್ಲ.

ಐಟಿ ಇಲಾಖೆಗೆ ಅದರದ್ದೇ ಆದ ನಿಯಮಗಳಿದ್ದು ಯಾರು ಆದಾಯಕ್ಕೂ ಮೀರಿ ಆಸ್ತಿ ಸಂಪಾದಿಸುತ್ತಾರೋ ಅಂತವರ ಮೇಲೆ ದಾಳಿ ನಡೆಸುವುದು ಆದಾಯ ತೆರಿಗೆ ಇಲಾಖೆಯ ಕರ್ತವ್ಯವಾಗಿದೆ. ಆದರೆ ಕಾಂಗ್ರೆಸ್ ಇದಕ್ಕೆ ರಾಜಕೀಯ ಬಣ್ಣ ಕಟ್ಟಿ ಆರೋಪಿಸುತ್ತಿರುವುದು ಆಧಾರ ರಹಿತವಾದ ಆರೋಪವಾಗಿದೆ ಜೊತೆಗೆ ಇದು ಚುನಾವಣಾ ಗಿಮಿಕ್ ಆಗಿದೆ. ಬಿಜೆಪಿಯ ಎಂದೂ ಕೂಡ ರಾಜಕೀಯ ಪ್ರೇರಿತವಾಗಿ ಯಾವುದೇ ದಾಳಿ ನಡೆಸಲು ಆದಾಯ ತೆರಿಗೆ ಇಲಾಖೆಗೆ ಸೂಚಿಸಿಲ್ಲ ಈ ಹಿನ್ನೆಲೆಯಲ್ಲಿ ಇದನ್ನು ಕಾಂಗ್ರೆಸ್ ರಾಜಕೀಯ ಲಾಭಕ್ಕೆ ಬಳಸಿಕೊಳ್ಳುವುದನ್ನು ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!