ಆನ್‌ಲೈನ್‌ನಲ್ಲಿ ವಿದ್ಯಾರ್ಥಿ ವೇತನದ ಅರ್ಜಿ ಜೊತೆಗೆ ಫ್ರೀಶಿಪ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ

0
583

ಹೊಸನಗರ: 2021-22ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಹೊಸನಗರ ತಾಲ್ಲೂಕಿನ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಪಡೆಯಲು ಇಚ್ಫಿಸುವ ವಿದ್ಯಾರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ದಿನಾಂಕ:20-10-2021ರಿಂದ ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.sw.kar.nic.in ನಲ್ಲಿ ಪರಿಶಿಷ್ಟಜಾತಿ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.tw.kar.nic.in ನಲ್ಲಿ ಪರಿಶಿಷ್ಟವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿ ವೇತನದ ಅರ್ಜಿ ಜೊತೆಗೆ ಫ್ರೀಶಿಪ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿ ವೇತನದ ಅರ್ಜಿಯೊಂದಿಗೆ ಫ್ರೀಶಿಪ್ ಕಾರ್ಡ್ ಪಡೆಯಲು ವಿದ್ಯಾರ್ಥಿಗಳು ಪೂರಕ ಮಾಹಿತಿಯನ್ನು ಒದಗಿಸಬೇಕು. ಆನಂತರದಲ್ಲಿ ಫ್ರೀಶಿಪ್ ಕಾರ್ಡ್ ಕೋರಿ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಎರಡು ದಿನಗಳ ಬಳಿಕ ಫ್ರೀಶಿಪ್ ಕಾರ್ಡ್‌ನ ಮುದ್ರಣವನ್ನು ಪಡೆಯಬಹುದಾಗಿದೆ. ಆನ್‌ಲೈನ್ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಹಾಗೂ ಜಾತಿ, ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಕಳೆದ ಸಾಲಿನ ಅಂಕಪಟ್ಟಿ, ಆನ್‌ಲೈನ್ ಅಪ್ ಲೋಡ್ ಮಾಡಲಾದ ಶುಲ್ಕದ ರಶೀದಿಯ ನಕಲು ಪ್ರತಿ ಹಾಗೂ ಆಧಾರ್ ಕಾರ್ಡಿನ ಜೆರಾಕ್ಸ್ ಪ್ರತಿಯನ್ನು ಹಾಗೂ ಫ್ರೀಶಿಪ್ ಕಾರ್ಡ್‌ನ ಜೆರಾಕ್ಸ್ ಪ್ರತಿಯನ್ನು ವಿದ್ಯಾರ್ಥಿಯು ವ್ಯಾಸಂಗ ಮಾಡುತ್ತಿರುವ ಕಾಲೇಜು ಪ್ರಾಂಶುಪಾಲರಿಗೆ ನೀಡ ಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ಗ್ರೇಡ್2 ನಿರ್ದೆಶಕರಾದ ಇಕ್ಬಾಲ್ ಜಾತಿಗೇರ್‌ರವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here