ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ಕುಂಸಿಯಲ್ಲಿ ಸೆರೆ !

0
427

 

ಚಿಕ್ಕಮಗಳೂರು: ಗಾಂಜಾ ಕೇಸ್ ನಲ್ಲಿ ಬಂಧಿತನಾಗಿದ್ದ ವಿಚಾರಣಾಧೀನ ಖೈದಿ ಚಿಕಿತ್ಸೆಗೆಂದು ದಾಖಲಾಗಿದ್ದ ವೇಳೆ ಸರ್ಕಾರಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯನ್ನು ಜಿಲ್ಲೆಯ ಕಡೂರು ಪೊಲೀಸರು ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಬಂಧಿಸಿದ್ದಾರೆ.

ಕಡೂರು ತಾಲೂಕಿನ ಧನರಾಜ್ ಎಂಬುವನನ್ನ ಕಡೂರು ಪೊಲೀಸರು ಗಾಂಜಾ ಪ್ರಕರಣದಲ್ಲಿ ಬಂದಿಸಿದ್ದರು. ವಿಚಾರಣಾಧೀನ ಕೈದಿಯಾಗಿದ್ದ ಧನರಾಜ್ ಹೊಟ್ಟೆನೋವು ಎಂಬ ಕಾರಣಕ್ಕೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಧನರಾಜ್ ಶೌಚಾಲಯಕ್ಕೆ ಹೋಗಬೇಕೆಂದು ಕೇಳಿಕೊಂಡಿದ್ದ. ಈ ವೇಳೆ ಆಸ್ಪತ್ರೆಯಲ್ಲಿ ಕಾವಲಿಗೆ ಇದ್ದ ಸಿಬ್ಬಂದಿ ಆತನ ಕೈಗಳಿಗೆ ಹಾಕಿದ್ದ ಕೋಳವನ್ನು ಬಿಚ್ಚಿ ಕಳುಹಿಸಿದ್ದರು. ಆರೋಪಿ ಧನರಾಜ್ ಶೌಚಗೃಹಕ್ಕೆ ಹೋಗುವಾಗ ಸಿಬ್ಬಂದಿಯನ್ನು ಅದೇ ಶೌಚಾಲಯದ ಒಳಕ್ಕೆ ದೂಡಿ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದನು.

ಬಳಿಕ ಆರೋಪಿ ಧನರಾಜ್ ಗಾಗಿ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಹುಡುಕಾಟ ಆರಂಭಿಸಿದರು. ಶಿವಮೊಗ್ಗ ತಾಲೂಕಿನ ಕುಂಸಿಯಲ್ಲಿ ಆರೋಪಿ ಧನರಾಜ್ ಇರುವುದನ್ನ ಖಚಿತಪಡಿಸಿಕೊಂಡ ಜೈಲು ಸಿಬ್ಬಂದಿ ಹಾಗೂ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆತನ ಬಳಿ ಯಾವುದೇ ಮೊಬೈಲ್ ಇಲ್ಲದಿದ್ದರೂ ಕೂಡ ಆರೋಪಿಯ ಜಾಡು ಹಿಡಿದು 48 ಗಂಟೆಯೊಳಗೆ ಪೊಲೀಸರು ಆತನನ್ನು ಸೆರೆ ಹಿಡಿದಿದ್ದಾರೆ. ಪೊಲೀಸರ ಈ ಕಾರ್ಯಕ್ಕೆ ಎಸ್ಪಿ ಅಕ್ಷಯ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಕಡೂರು ಪಿ.ಎಸ್.ಐ. ರಮ್ಯಾ, ಜೈಲು ಸಿಬ್ಬಂದಿ ಪಾಲ್ಗೊಂಡಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here