ಈಶ್ವರಪ್ಪರವರ ಕೈ ತಪ್ಪಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸ್ಥಾನ ! ಇನ್ಮುಂದೆ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಯಾರ ಹೆಗಲಿಗೆ ಗೊತ್ತಾ ?

0
799

ಶಿವಮೊಗ್ಗ/ಚಿಕ್ಕಮಗಳೂರು: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸ್ಥಾನ ಕೆ.ಎಸ್. ಈಶ್ವರಪ್ಪನವರ ಕೈ ತಪ್ಪಿದೆ.

ಹೌದು, ರಾಜ್ಯ ಸರ್ಕಾರ ಕೋವಿಡ್ ಉಸ್ತುವಾರಿ ಹಾಗೂ ಜಿಲ್ಲಾ ಉಸ್ತುವಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದ್ದು, ಈವರೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದರು. ಇನ್ಮುಂದೆ ಅವರು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ನಿಭಾಯಿಸಬೇಕಿದೆ. ಈ ಪೈಕಿ ಸಚಿವ ಕೆ.ಎಸ್. ಈಶ್ವರಪ್ಪನವರಿಗೆ ಚಿಕ್ಕಮಗಳೂರು ಜಿಲ್ಲೆಯ ಉಸ್ತುವಾರಿಯನ್ನು ನೀಡಲಾಗಿದೆ.

ಇನ್ನೂ ಯುವಜನ ಸಬಲೀಕರಣ ಮತ್ತು ಕ್ರೀಡೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ‌.ಸಿ ನಾರಾಯಣ್ ಗೌಡರಿಗೆ ಶಿವಮೊಗ್ಗ ಜಿಲ್ಲೆ ಉಸ್ತುವಾರಿಯನ್ನು ನೀಡಲಾಗಿದೆ.

ಇವತ್ತೇ ಆದೇಶ ಹೊರಬಿದ್ದಿದ್ದು, ರಾಜ್ಯಸರ್ಕಾರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here