Home Accident ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಓರ್ವ ಸಾವು, ಮೂವರಿಗೆ ಗಂಭೀರ ಗಾಯ !!
ಮೂಡಿಗೆರೆ : ತಾಲ್ಲೂಕಿನ ಬಿದರಹಳ್ಳಿಯಲ್ಲಿ ಎರಡು ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೃತನನ್ನು ಅಪ್ಸರ್ (49) ಎಂದು ಗುರುತಿಸಲಾಗಿದೆ. ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಈತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಅದೇ ಕಾರಿನಲ್ಲಿದ್ದ ಫಯಾಜ್, ಅಜ್ಮಲ್ ಮತ್ತು ಮೊಹಮ್ಮದ್ ರೂಯಿಸ್ ಕೈ, ಕಾಲುಗಳಿಗೆ ತೀವ್ರ ಪೆಟ್ಟಾಗಿದ್ದು ಇವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಚಿಕ್ಕಮಗಳೂರಿನಿಂದ ಬಣಕಲ್ ಗೆ ಬರುವಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತಪಟ್ಟ ಅಪ್ಸರ್ ಬಣಕಲ್ ಮೂಲದವನಾಗಿದ್ದು, ಬಣಕಲ್ ಪಟ್ಟಣದಲ್ಲಿ ಎಳನೀರು ಮತ್ತು ಫ್ರೂಟ್ ವ್ಯಾಪಾರ ಮಾಡುತ್ತಿದ್ದ ಎಂದು ಎನ್ನಲಾಗಿದೆ. ಎದುರುಗಡೆ ಬಂದ ಕಾರು ಕೆನರಾ ಬ್ಯಾಂಕ್ ಮ್ಯಾನೇಜರ್ ಅವರಿಗೆ ಸೇರಿದ್ದು ಎಂದು ತಿಳಿದುಬಂದಿದೆ.
ಈ ಘಟನೆ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Related