ಎರಡು ಬೃಹತ್ ಗಾತ್ರದ ಆನೆ ದಂತ ಮಾರಾಟ ಮಾಡಲು ಯತ್ನ ; ಮಾಲು ಸಮೇತ ಐವರ ಬಂಧನ

0
448

ಚಿಕ್ಕಮಗಳೂರು: ಎರಡು ಬೃಹತ್ ಗಾತ್ರದ ಆನೆ ದಂತಗಳನ್ನ ಮಾರಾಟ ಮಾಡಲು ಯತ್ನಿಸಿದ್ದ ಐವರು ಆರೋಪಿಗಳನ್ನ ನಗರದ ಪೊಲೀಸ್ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಮಾಲು ಸಮೇತ ಬಂಧಿಸಿದ್ದಾರೆ.

ಬಂಧಿತರನ್ನ ತರೀಕೆರೆ ತಾಲೂಕು ಮೂಲದ ಶಿವಕುಮಾರ್, ಸುಂದ್ರೇಶ್, ಮಹಾಂತೇಶ್, ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮೂಲದ ನೂರ್ ಅಹಮದ್, ಚಿತ್ರದುರ್ಗ ತಾಲೂಕಿನ ಅಂಜಿನಪ್ಪ ಎಂದು ಗುರುತಿಸಲಾಗಿದೆ.

ಕಳೆದ ಆರು ತಿಂಗಳಿನಿಂದ ನಮ್ಮ ಬಳಿಯೇ ಆನೆ ದಂತಗಳಿದ್ದವು. ಇಂದು ಮಾರಾಟ ಮಾಡಲು ಯತ್ನಿಸುತ್ತಿದ್ದೇವು ಎಂದು ಅರಣ್ಯ ಅಧಿಕಾರಿಗಳಿಗೆ ಬಂಧಿತರು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ತರೀಕೆರೆ ತಾಲೂಕು ಮೂಲದ ಶಿವಕುಮಾರ್ ಹಾಗೂ ಸುಂದ್ರೇಶ್ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಅಕ್ಕಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಮೀಸಲು ಹಾಗೂ ದಟ್ಟಾರಣ್ಯ. ಅನುಮತಿ ಇಲ್ಲದೆ ಯಾರು ಒಳಗೆ ಹೋಗುವಂತಿಲ್ಲ. ಆದರೂ, ಕಾಫಿ ಎಸ್ಟೇಟ್‍ನಲ್ಲಿ ಕೆಲಸಗಾರರಾಗಿದ್ದ ಶಿವಕುಮಾರ್ ಹಾಗೂ ಸುಂದ್ರೇಶ್ ಮೀಸಲು ಅರಣ್ಯದ ಹಳ್ಳದಲ್ಲಿ ಅಕ್ರಮವಾಗಿ ಮೀನು ಹಿಡಿಯಲು ಹೋಗುತ್ತಿದ್ದರು. ಈ ವೇಳೆ ಕಾಡಿನಲ್ಲಿ ಆನೆ ಸಾವನ್ನಪ್ಪಿರೋದ ಕಂಡು ಅದರ ಎರಡು ಬೃಹತ್ ದಂತಗಳನ್ನ ತಂದು ಮನೆಯಲ್ಲಿ ಇಟ್ಟುಕೊಂಡಿದ್ದರು. ಆರು ತಿಂಗಳಿಂದ ಇವರ ಬಳಿಯೇ ಇತ್ತು. ಅದನ್ನ ಮಾರಾಟ ಮಾಡಲು ಗೊತ್ತಾಗದೆ ಮಧ್ಯವರ್ತಿಗಳಿಂದ ತಾಲೂಕಿನ ಅಲ್ಲಂಪುರ ಪೆಟ್ರೊಲ್ ಬಂಕ್ ಮುಂಭಾಗ ಮಾರಾಟ ಮಾಡಲು ಮುಂದಾದಾಗ ಆರೋಪಿಗಳು ಸೇರಿ ಮೂವರು ಮಧ್ಯವರ್ತಿಗಳನ್ನು ಚಿಕ್ಕಮಗಳೂರು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿ, ಆನೆ ದಂತಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ಕೋರ್ಟ್ ಆದೇಶ ನೀಡಿದೆ.

ಜಾಹಿರಾತು

LEAVE A REPLY

Please enter your comment!
Please enter your name here