20.6 C
Shimoga
Friday, December 9, 2022

ಎಲೆಚುಕ್ಕಿ ರೋಗ ಪರಿಹಾರಕ್ಕೆ ಕ್ರಮ ; ಸಿಎಂ

ಕಡೂರು: ಅಡಿಕೆಗೆ ತಗುಲಿರುವ ಎಲೆಚುಕ್ಕಿ ರೋಗ ಹತೋಟಿ ನಿಟ್ಟಿನಲ್ಲಿ ಸಿಂಪಡಿಸಲು ಔಷಧ ವಿತರಿಸಲಾಗುತ್ತಿದೆ.

ರೋಗದ ಮೂಲ ಪತ್ತೆ ಹಚ್ಚಿ, ನಿವಾರಣೆಗೆ ಔಷಧ ಶೋಧನೆಗೆ ವಿಜ್ಞಾನಿಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಎಲೆಚುಕ್ಕಿ ರೋಗವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಪರಿಹಾರಕ್ಕೆ ಕ್ರಮ ವಹಿಸುತ್ತೇವೆ ಎಂದು ಉತ್ತರಿಸಿದರು.

ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆಚುಕ್ಕಿ ರೋಗ ಕಾಣಿಸಿಕೊಂಡಿದ್ದು, ಈಗಾಗಲೇ ವಿಶ್ವವಿದ್ಯಾಲಯಗಳು, ಸಂಬಂಧಪಟ್ಟ ಇಲಾಖೆ, ಕೇಂದ್ರ ಸರ್ಕಾರದ ಸಂಸ್ಥೆಗಳು ಎಲೆಚುಕ್ಕೆ ರೋಗ ಪರಿಹರಿಸಲು ಕಾರ್ಯೋನ್ಮುಖವಾಗಿವೆ. ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಔಷಧ ಸಿಂಪಡಣೆಗೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಎಲೆಚುಕ್ಕಿ ರೋಗದ ಮೂಲ ಕಾರಣ ಹಾಗೂ ಔಷಧಿಯ ಬಗ್ಗೆ ವಿಜ್ಞಾನಿಗಳು ಅಧ್ಯಯನ ನಡೆಸಿ, ಚಿಕಿತ್ಸಾ ಮಾರ್ಗ ಕಂಡುಹಿಡಿದರೆ ಅದರಂತೆ ಸರ್ಕಾರ ಕ್ರಮಕೈಗೊಳ್ಳುವುದು. ಈ ರೋಗ ದೊಡ್ಡ ಪ್ರಮಾಣದಲ್ಲಿ ಹರಡುತ್ತಿರುವುದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ ಎಂದರು.

ಜನ ಅವರನ್ನು ನಂಬುವ ಪ್ರಶ್ನೆ ಇಲ್ಲ

2013ರಲ್ಲಿ ಜನರು ಸಿದ್ದರಾಮಯ್ಯ ಅವರನ್ನು ನಂಬಿ ಮತ ಹಾಕಿದ್ದರು. ಅವರು ಮುಖ್ಯಮಂತ್ರಿಯಾಗಿದ್ದರು. ಅವರು ಜನರ ನಂಬಿಕೆ ಉಳಿಸಿಕೊಂಡಿಲ್ಲ. ಮತ್ತೆ ಜನರು ಅವರನ್ನು ನಂಬುವ ಪ್ರಶ್ನೆ ಇಲ್ಲ ಈ ಸಂದರ್ಭದಲ್ಲಿ ಸಿಎಂ ಹೇಳಿದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!