ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತ: ಕೆ.ಎಸ್. ಈಶ್ವರಪ್ಪ

0
234

ಚಿಕ್ಕಮಗಳೂರು: ರಾಜ್ಯದಲ್ಲಿ ಮುಂಬರುವ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ತನ್ನ ಕಾರ್ಯಕರ್ತರ ಬಲದಿಂದ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಬಿಜೆಪಿ ಪಾಂಚಜನ್ಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಸುಸಂಘವಾಗಿ ಬೆಳೆಯುತ್ತಿದೆ. ಈ ವರೆಗೆ ರಾಜ್ಯದಲ್ಲಿ ಅತಿಹೆಚ್ಚು ಚುನಾವಣೆಗಳನ್ನು ಗೆದ್ದಿದ್ದು ಮುಂಬರುವ ವಿಧಾನಸಭಾ ಚುನಾವನೆಯಲ್ಲಿ 150 ಸ್ಥಾನಗಳನ್ನು ಗೆದ್ದು ಬಿಜೆಪಿ ಪೂರ್ಣಬಹುಮತ ಪಡೆಯುತ್ತದೆ. ಬಿಜೆಪಿ ಸರ್ಕಾರದ ಸಾಧನೆಗಳನ್ನು ಸಹಿಸಲಾಗದೇ ಕಾಂಗ್ರೆಸ್ ದಿನೇದಿನೇ ಬೇರೆ ಬೇರೆ ಅಪಾದನೆಗಳನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದ ಇತಹಾಸದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹಲವು ಯೋಜನೆಗಳ ಮೂಲಕ ಉತ್ತಮ ಕೆಲಸಗಳನ್ನು ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನರೇಗಾದಲ್ಲಿ 13 ಕೋಟಿ ಮಾನವ ದಿನಗಳನ್ನು ಕೇಂದ್ರ ಸರ್ಕಾರ ಗುರು ನೀಡಿತ್ತು. ಇದನ್ನು ಪೂರೈಸಲು ಮಾರ್ಚ್ ವರೆಗೆ ಅವಕಾಶ ನೀಡಿದ್ದು ನವಂಬರ್‌ನಲ್ಲಿ ಗುರಿ ತಲುಪಲಾಗಿದ್ದು ಹೆಚ್ಚುವರಿಯಾಗಿ 150 ಮಾನವ ದಿನಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ್ದು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳ ಮೂಲಕ ಅನುದಾನ ನೀಡಲಾಗಿದ್ದು ಮುಂದಿನ ದಿನಗಳಲ್ಲಿ ಈ ಎಲ್ಲಾ ಅಂಶಗಳು ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿಇ ಹಾಗೂ ವಿಧಾನ ಪರಿಷತ್ ಚುನಾವಣೆಗೆ ನಮಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಜಲಜೀವನ್ ಯೋಜನೆ, ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಡಿ. ವಿ ಸದಾನಂದಗೌಡ ಮಾತನಾಡಿ, ಈ ಬಾರಿ ಅತಿವೃಷ್ಟಿಯಿಂದ ಕಾಫಿ ಮತ್ತು ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಸಂಸತ್ ಅಧಿವೇಶನ ನಡೆಯಲಿದ್ದು ಸಂಸದೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು ಅಡಿಕೆ ಆರೋಗ್ಯಕ್ಕೆ ಮಾರಕವಲ್ಲ ಎನ್ನುವುದು ಅನೇಕ ಸಂಶೋಧನೆಗಳಿದ ಸಾಭೀತಾಗಿದೆ ಇದನ್ನು ಸುಪ್ರೀಂ ಕೋರ್ಟ್ ಮುಂದೆಯೂ ಮನವರಿಕೆ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ ಅವರು, ರಾಜ್ಯದಲ್ಲಿ 2023ರ ಒಳಗೆ ಎಲ್ಲಾ ರೈಲ್ವೆ ಲೈನ್ ಗಳ ಡಬ್ಲಿಂಗ್ ಮತ್ತು ವಿದ್ಯುದೀಕರಣ ಪೂರ್ಣಗೊಳ್ಳುತ್ತದೆ ಎಂದು ಆಶ್ವಾಸನೆ ನೀಡಿದರು.

ಜಾಹಿರಾತು

LEAVE A REPLY

Please enter your comment!
Please enter your name here