ಎಸಿಬಿ ವಶಕ್ಕೆ ಟಿ.ಎಸ್. ರುದ್ರೇಶಪ್ಪ !

0
896
ಶಿವಮೊಗ್ಗ: ಆದಾಯ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪದಲ್ಲಿ ಗದಗ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಭಾರಿ ಪ್ರಮಾಣದಲ್ಲಿ ಗಟ್ಟಿ ಬಂಗಾರ ಪತ್ತೆ ಆದ ಹಿನ್ನೆಲೆಯಲ್ಲಿ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೆ ಅವರು ಎರಡು ಜೆಸಿಬಿ, ಲಕ್ಷಾಂತರ ರೂಪಾಯಿ ಮೌಲ್ಯದ ಎಲ್‌ಐಸಿ ಬಾಂಡ್ ಗಳನ್ನು ಹೊಂದಿದ್ದಾರೆ. ಬ್ಯಾಂಕ್ ನಲ್ಲಿ 20 ಲಕ್ಷ ರೂಪಾಯಿ ಠೇವಣಿ ಇಡಲಾಗಿದೆ. ಇನ್ನು ರುದ್ರೇಶಪ್ಪ ಅವರ ಮನೆಯಲ್ಲಿ 7 ಕೆಜಿ ಚಿನ್ನದ ಬಿಸ್ಕೆಟ್, ಡೈಮಂಡ್ ಹಾರ, 1.5 ಕೆಜಿ ಚಿನ್ನಾಭರಣ, 3 ಕೆಜಿ ಬೆಳ್ಳಿ ಹಾಗೂ 15 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.

20 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎರಡು ದ್ವಿಚಕ್ರ ವಾಹನಗಳು, 8 ಎಕರೆ ಕೃಷಿ ಜಮೀನು 4 ನಿವೇಶನ ಪತ್ತೆಯಾಗಿವೆ. ನಾಳೆ ಬೆಳಗ್ಗೆ ಒಂದು ಲಾಕರ್ ಓಪನ್ ಮಾಡಬೇಕಿರುವ ಹಿನ್ನಲೆಯಲ್ಲಿ ರುದ್ರೇಶಪ್ಪ ಅವರನ್ನು ವಶಕ್ಕೆ ಪಡೆಯಲಾಗಿದೆ. ಎಸಿಬಿ ಎಸ್.ಪಿ. ಜಯಪ್ರಕಾಶ್ ನೇತೃತ್ವದ ಅಧಿಕಾರಿಗಳ ತಂಡ ಅವರನ್ನು ವಶಕ್ಕೆ ಪಡೆದುಕೊಂಡಿದೆ ಎನ್ನಲಾಗಿದೆ.

ಇಂದು ರಾಜ್ಯದ 15 ಸರ್ಕಾರಿ ನೌಕರರು, ಅಧಿಕಾರಿಗಳಿಗೆ ಸೇರಿದ 68 ಸ್ಥಳಗಳಲ್ಲಿ 503 ಎಸಿಬಿ ಅಧಿಕಾರಿಗಳ 68 ತಂಡಗಳಿಂದ ದಾಳಿ ನಡೆಸಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here