ಏ.01 ರಂದು ರಿಪ್ಪನ್‌ಪೇಟೆಯಲ್ಲಿ ಸಿದ್ದಗಂಗಾ ಶ್ರೀಗಳ ಜನ್ಮದಿನಾಚರಣೆ

0
307

ರಿಪ್ಪನ್‌ಪೇಟೆ: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಶತಾಯುಶಿ, ಕಾಯಕ ಯೋಗಿ ಲಿಂಗೈಕ್ಯ ಶ್ರೀ ಡಾ. ಶಿವಕುಮಾರ ಶ್ರೀಗಳವರ 114 ನೇ ಜನ್ಮದಿನಾಚರಣೆಯು ಏಪ್ರಿಲ್ 1 ರಂದು ರಿಪ್ಪನ್‌ಪೇಟೆಯ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಶಿವಕುಮಾರಸ್ವಾಮಿಗಳ ಭಕ್ತವೃಂದದ ಸಂಚಾಲಕ ಕೆ.ವಿ.ಲಿಂಗಪ್ಪ ಹಾಗೂ ಹೆಗಡೆ ತಿಳಿಸಿದರು.

ಈ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಮ.ನಿ.ಪ್ರ.ಅಭಿನವ ಚನ್ನಬಸವ ಮಹಾಸ್ವಾಮಿಜಿ ಹವಿಸಿ ಅಶೀರ್ವಚನ ನೀಡುವರು.

ಕಾರ್ಯಕ್ರಮದಲ್ಲಿ ಗ್ರಾಮಾಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್, ಉಪಾಧ್ಯಕ್ಷೆ ಮಹಾಲಕ್ಷ್ಮೀ, ಸೇರಿದಂತೆ ಗೌರವಾನ್ವಿತ ಸದಸ್ಯರು ಹಾಗೂ ಸಮಾಜ ಭಾಂದವರು ಮತ್ತು ಶ್ರೀಗಳ ಭಕ್ತವೃಂದ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕೋವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಕಾರ್ಯಕ್ರಮದ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here