ಏ.11ರಂದು ನಡೆಯಬೇಕಿದ್ದ ಕೆ-ಸೆಟ್ ಪರೀಕ್ಷೆ ಮುಂದೂಡಿಕೆ

0
487

ಶಿವಮೊಗ್ಗ: ಏಪ್ರಿಲ್ 11ರಂದು ನಿಗದಿಯಾಗಿದ್ದ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯನ್ನು ಮುಂದೂಡಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕೆ-ಸೆಟ್ ಪರೀಕ್ಷಾ ಸಂಯೋಜನಾಧಿಕಾರಿ ಪ್ರೊ. ಎಚ್. ರಾಜಶೇಖರ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆಯ ಮೂಲಕ ಕುವೆಂಪು ವಿಶ್ವವಿದ್ಯಾಲಯಕ್ಕೆ ಮಾಹಿತಿ ನೀಡಿರುವ ಅವರು, ಕೆ-ಸೆಟ್ ಪರೀಕ್ಷೆಗೆ ರಾಜ್ಯಾದ್ಯಂತ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ಕಾರಣಾಂತರಗಳಿಂದ ಪರೀಕ್ಷೆಯನ್ನು ಮುಂದೂಡಲು ನಿರ್ಧರಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಕೆ-ಸೆಟ್ ವೆಬ್‌ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ನೊಂದಾಯಿತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗೆ ಮತ್ತು ಮುಂದಿನ ಪರೀಕ್ಷಾ ದಿನಾಂಕದ ಬಗ್ಗೆ ತಿಳಿದುಕೊಳ್ಳಲು ಕೆ-ಸೆಟ್ ‌ವೆಬ್‌ಸೈಟ್‌ ಅನ್ನು ಗಮನಿಸುತ್ತಿರುವಂತೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here