20.6 C
Shimoga
Friday, December 9, 2022

ಐಟಿ ದಾಳಿ ಖಂಡಿಸಿ ಜಿಲ್ಲಾ ಪೊಲೀಸ್ ಕಛೇರಿಯ ಬಳಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ; ಮನವಿ ಸಲ್ಲಿಕೆ

ಚಿಕ್ಕಮಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಗಾಯತ್ರಿ ಶಾಂತೇಗೌಡರ ಮನೆಯ ಮೇಲೆ ನಡೆದ ಐಟಿ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾ ಪೊಲೀಸ್ ಕಛೇರಿ ಬಳಿ ಪ್ರತಿಭಟನೆ ನಡೆಸಿದರು.


ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಡಾ.ಕೆ.ಪಿ ಅಂಶುಮತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸೇರಿದಂತೆ ವಿವಿಧ ತನಿಖಾ ಸಂಸ್ಥೆಗಳನ್ನು ಒಕ್ಕೂಟ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಟೀಕಿಸಿದರು.


ಗಾಯತ್ರಿ ಶಾಂತೇಗೌಡರ ಮನೆ ಮೇಲೆ ನಡೆದ ದಾಳಿ ರಾಜಕೀಯ ಪ್ರೇರಿತವಾಗಿದ್ದು, ನಿಜವಾದ ಭ್ರಷ್ಟರ ಮೇಲೆ ದಾಳಿ ನಡೆಯುತ್ತಿಲ್ಲ ಎಂದು ಆರೋಪಿಸಿದರು.


ಪ್ರತಿಭಟನೆಯಲ್ಲಿ ಮಾಜಿ ಸಚಿವೆ ಮೋಟಮ್ಮ ಮುಖಂಡರಾದ ರೇಖಾ ಹುಲಿಯಪ್ಪ ಗೌಡ, ದೇವರಾಜ ಪಾಲ್ಗೊಂಡಿದ್ದರು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!