ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣೆ 2021: ಪರಿಷ್ಕೃತ ಚುನಾವಣಾ ವೇಳಾಪಟ್ಟಿ ಪ್ರಕಟ

0
247

ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರ ಚುನಾವಣೆ-2021 ನ್ನು ನವೆಂಬರ್ 21 ರಂದು ನಡೆಸಲು ನಿಗದಿಗೊಳಿಸಲಾಗಿದ್ದು, ಸರ್ಕಾರದ ಆದೇಶದಕಂತೆ ಕೆಳಕಂಡಂತೆ ಪರಿಷ್ಕೃತ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಗಡಿನಾಡ/ಹೊರನಾಡ ಮತದಾರರಿಗೆ ಕೇಂದ್ರ ಚುನಾವಣಾಧಿಕಾರಿಗಳ ಕಚೇರಿಯಿಂದ ರಿಜಿಸ್ಟರ್ಡ್ ಅಂಚೆಯ ಮೂಲಕ ಮತಪತ್ರಗಳ ರವಾನೆಗೆ ಕೊನೆಯ ದಿನಾಂಕ: 06-11-2021 ಆಗಿರುತ್ತದೆ.

ಮತದಾನ (ಅವಶ್ಯವಿದ್ದಲ್ಲಿ) ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಹಾಗೂ ಹಾಲಿ ಹೋಬಳಿ ಮತಕೇಂದ್ರಗಳಲ್ಲಿ ಗುರುತಿಸಲಾದ ಮತಗಟ್ಟೆಗಳಲ್ಲಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ಮತಗಟ್ಟೆಗಳಲ್ಲಿ ನವೆಂಬರ್ 21 ರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ನಡೆಯಲಿದೆ. ನವೆಂಬರ್ 21 ರಂದೇ ಮತದಾನದ ನಂತರ ಮತ ಎಣಿಕೆ ಮತ್ತು ಜಿಲ್ಲಾ ಘಟಕಗಳ ಅಧ್ಯಕ್ಷರ ಫಲಿತಾಂಶ ಘೋಷಣೆ ಮಾಡಲಾಗುವುದು.

ಶಿವಮೊಗ್ಗ-ಮತ ಎಣಿಕೆ ವಿವರ :

ಶಿವಮೊಗ್ಗ ಜಿಲ್ಲೆಯ ಆಯಾ ತಾಲ್ಲೂಕುಗಳಲ್ಲಿ ನ.21 ರಂದು ಚುನಾವಣೆ ನಡೆಯಲಿದ್ದು ಶಿವಮೊಗ್ಗ ತಾಲ್ಲೂಕಿಗೆ ಸಂಬಂಧಿಸಿದಂತೆ ಒಟ್ಟು ಮೂರು ಮತಗಟ್ಟೆಗಳಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ ಕಟ್ಟಡ ಸಂಕೀರ್ಣದಲ್ಲಿ ನಡೆಯಲಿದೆ. ಮತಗಟ್ಟೆ ಸಂಖ್ಯೆ 9/1-1, 9/1-2, 9/1-3 ಆಗಿರುತ್ತದೆ ಎಂದು ಕ.ಸಾ.ಪ ಚುನಾವಣಾಧಿಕಾರಿ ಹಾಗೂ ಶಿವಮೊಗ್ಗ ತಹಶೀಲ್ದಾರ್ ನಾಗರಾಜ್ ಎನ್.ಜೆ ತಿಳಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here