ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ತಾಲ್ಲೂಕು ಆಡಳಿತ ಸಜ್ಜು: ತಹಶೀಲ್ದಾರ್ ವಿ.ಎಸ್. ರಾಜೀವ್

0
247

ಹೊಸನಗರ: ಇದೇ ತಿಂಗಳು 21ರ ಭಾನುವಾರ ಕರ್ನಾಟಕದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ನಡೆಯಲಿದ್ದು ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಹೊಸನಗರ ಸಂಪೂರ್ಣ ಸಜ್ಜಾಗಿದೆ ಎಂದು ತಹಶೀಲ್ದಾರ್ ವಿ.ಎಸ್ ರಾಜೀವ್‌ರವರು ತಿಳಿಸಿದ್ದಾರೆ.

ಹೊಸನಗರ ತಾಲ್ಲೂಕು ಕಛೇರಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 1052 ಮತದಾರರಿದ್ದು ಭಾನುವಾರ ಬೆಳಿಗ್ಗೆ 8ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮತದಾನವು ಹೊಸನಗರದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು ಒಂದು ಬೂತ್ ತಯಾರಿ ಮಾಡಿಕೊಳ್ಳಲಾಗಿದ್ದು 5ಜನ ಸಿಬ್ಬಂದಿಯನ್ನು ನೇಮಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಸದಸ್ಯರು ಚುನಾವಣೆಗೆ ನಿಗದಿಪಡಿಸಿದ ಸಮಯದಲ್ಲಿ ಗುಂಪು-ಗುಂಪಾಗಿ ಬಂದು ಮತದಾನ ಮಾಡುವ ಬದಲು ಬಿಡುವಿನ ವೇಳೆಯಲ್ಲಿ ಮತದಾನ ಮಾಡಿ ಈ ಚುನಾವಣೆಯನ್ನು ಯಶಸ್ವಿಗೊಳಿಸಿಕೊಡಬೇಕೆಂದು ಈ ಸಂದರ್ಭದಲ್ಲಿ ಕೇಳಿಕೊಂಡರು.

ಗ್ರೇಡ್2 ತಹಶೀಲ್ದಾರ್ ರಾಕೇಶ್, ಚುನಾವಣಾ ಶಿರಾಸ್ಥೆದಾರ್ ಸುಧೀಂದ್ರ ಕುಮಾರ್, ಸುರೇಶ್, ಶಿರಾಸ್ಥೆದಾರ್ ಶ್ರೀಕಾಂತ್ ಹೆಗ್ಡೆ, ಪ್ರಥಮ ದರ್ಜೆ ಗುಮಾಸ್ಥರಾದ ವಿನಯ್ ಎಂ ಆರಾಧ್ಯ, ಚಿರಾಗ್, ಗ್ರಾಮ ಲೆಕ್ಕಾಧಿಕಾರಿ ರೇಣುಕಯ್ಯ, ಕೌಶಿಕ್, ನವೀನ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here