ಮೂಡಿಗೆರೆ : ಕಾರ್ಯನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಪೊಲೀಸ್ ಪೇದೆಯೋರ್ವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಮುಖ್ಯ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಕೆ.ಬಿ ಪರಮೇಶ್ವರಪ್ಪ ಎಂಬ ಪೊಲೀಸ್ ಸಿಬ್ಬಂದಿ ಮೃತ ದುರ್ದೈವಿಯಾಗಿದ್ದು, ಬಣಕಲ್ ಪೊಲೀಸ್ ಠಾಣೆಯಲ್ಲಿ ಕಳೆದ ರಾತ್ರಿ ಹತ್ತು ಗಂಟೆಯ ವೇಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ತಕ್ಷಣ ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲಿ ಕೊನೆಯುಸಿರೆಳೆದಿದ್ದಾರೆ.
ಮೃತ ಕೆ.ಬಿ ಪರಮೇಶ್ವರಪ್ಪರವರು ಚಿಕ್ಕಮಗಳೂರು ಬಳಿಯ ಲಕ್ಯಾ ಹೋಬಳಿಯ ಕಣಿವೆ ಹಳ್ಳಿಯವರು. ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿ ಜನರ ವಿಶ್ವಾಸಕ್ಕೆ ಪಾತ್ರವಾಗಿದ್ದರು.
ಮೃತರು ಪೇದೆಗೆ ಪತ್ನಿ ಲಕ್ಷ್ಮಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದು, ಈ ಆಕಸ್ಮಿಕ ಸಾವಿನಗೆ ಬಣಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಬೇಸರ ವ್ಯಕ್ತಪಡಿಸಿದ್ದಾರೆ.
ಪರಮೇಶ್ವರಪ್ಪ ನವರ ಆಪ್ತ ವಲಯ ಹಾಗೂ ಸಾರ್ವಜನಿಕರು ಸಹ ಉತ್ತಮ ವ್ಯಕ್ತಿಯನ್ನು ಕಳೆದುಕೊಂಡ ನೋವನ್ನು ವ್ಯಕ್ತಪಡಿಸಿದ್ದಾರೆ.
Related