ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಆಯ್ಕೆ : ಅಭಿನಂದನೆ

0
625

ಶಿವಮೊಗ್ಗ: ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಕ್ರೀಡಾಪಟು ಕು|| ಅದಿತಿ ರಾಜೇಶ್ ಇವರು ಆಯ್ಕೆಯಾಗಿದ್ದು, ಇವರು ಏ. 18 ರಿಂದ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆಯಲಿರುವ ಹಿರಿಯ ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ.

ಅದಿತಿ ರಾಜೇಶ್‍ರವರು ಪ್ರಸ್ತುತ ನಗರದ ಡಿ.ವಿ.ಎಸ್ ವಿನೋಬನಗರ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಸಹ್ಯಾದ್ರಿ ಕಾಲೇಜಿನಲ್ಲಿರುವ ಕ್ರೀಡಾಂಗಣದಲ್ಲಿ ಕಳೆದ 8 ವರ್ಷಗಳಿಂದ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಕ್ರಿಕೆಟ್ ತರಬೇತುದಾರ ಪಿ.ವಿ.ನಾಗರಾಜ್ ಇವರ ಬಳಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಮಹಿಳಾ ಟಿ-20 ಕ್ರಿಕೆಟ್ ಪಂದ್ಯಾವಳಿಗೆ ಆಯ್ಕೆಯಾಗಿ ನಗರಕ್ಕೆ ಕೀರ್ತಿ ತಂದ ಈ ಪ್ರತಿಭಾವಂತ ಬಾಲಕಿಗೆ ಡಿ.ಎಸ್.ಅರುಣ್, ಕೆ.ಎಸ್.ಸಿ.ಎ ಶಿವಮೊಗ್ಗ ವಲಯದ ಸಂಚಾಲಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥಸ್ವಾಮಿ.ಎಂ.ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಭಾರತೀಯ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿ ಜಿಲ್ಲೆ ಹಾಗೂ ರಾಜ್ಯಕ್ಕೆ ಹೆಚ್ಚಿನ ಕೀರ್ತಿ ತರಲೆಂದು ಹಾರೈಸಿ, ಅಭಿನಂದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಜಾಹಿರಾತು

LEAVE A REPLY

Please enter your comment!
Please enter your name here