ಕಾಂಗ್ರೆಸ್ ಪಕ್ಷದ ಬಗ್ಗೆ ಜನರಲ್ಲಿ ಒಲವು ಹೆಚ್ಚುತ್ತಿದೆ: ಆರ್.ಸಿ ಪಾಟೀಲ್

0
281

ಸೊರಬ: ಜನತೆಯಲ್ಲಿ ಕಾಂಗ್ರೆಸ್ ಪಕ್ಷದ ಬಗ್ಗೆ ಒಲವು ಹೆಚ್ಚುತ್ತಿದ್ದು, ತಾಲ್ಲೂಕು ಸೇರಿದಂತೆ ರಾಜ್ಯದಲ್ಲಿ ಪಕ್ಷ ಬಲಿಷ್ಟಗೊಳ್ಳುತ್ತಿದೆ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ. ಪಾಟೀಲ್ ಹೇಳಿದರು.

ತಾಲ್ಲೂಕಿನ ಆನವಟ್ಟಿಯ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸೋಮವಾರ ಗ್ರಾಮ ಪಂಚಾಯ್ತಿ ಮತ್ತು ವಾರ್ಡ್ ಸಮಿತಿ ರಚನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಸರ್ಕಾರಗಳ ವಿರುದ್ಧ ಜನತೆ ಬೇಸತ್ತು ಹೋಗಿದ್ದಾರೆ. ದೈನಂದಿನ ಬಳಕೆಯ ವಸ್ತುಗಳ ಬೆಲೆ ಗಗನಕ್ಕೆ ಏರುತ್ತಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಬಗ್ಗೆ ಜನತೆ ಹೆಚ್ಚಿನ ಪ್ರಮಾಣದಲ್ಲಿ ಆಸಕ್ತಿ ತೋರುತ್ತಿದ್ದು, ಗ್ರಾಮೀಣ ಮಟ್ಟದಿಂದ ಹಿಡಿದು ಕಾಂಗ್ರೆಸ್ ಬೆಂಬಲಿಸುತ್ತಿದ್ದಾರೆ. ಈಗಾಗಲೇ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಸಂಘಟನಾ ದೃಷ್ಟಿಯಿಂದ ಬಲಿಷ್ಟವಾಗಿದ್ದು, ಯುವಕರಲ್ಲಿ ನವ ಉತ್ಸಾಹ ಮೂಡಿದೆ ಎಂದರು.

ಮುಖಂಡ ಕೆ.ಪಿ. ರುದ್ರಗೌಡ ಮಾತನಾಡಿ, ಮಧು ಬಂಗಾರಪ್ಪ ಅವರ ಕಾಂಗ್ರೆಸ್ ಸೇರ್ಪಡೆಯಿಂದ ಭವಿಷ್ಯದ ದೃಷ್ಟಿಯಿಂದ ಉತ್ತಮ ನಿರ್ಧಾರವಾಗಿದೆ ಜೊತೆಗೆ ತಾಲ್ಲೂಕಿನಲ್ಲಿ ಕಾಂಗ್ರೆಸ್‌ಗೆ ಹೊಸ ಶಕೆ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ ಅನೇಕರು ಮಧುಬಂಗಾರಪ್ಪ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದರು.

ಪಕ್ಷದ ಪ್ರಧಾನ ಕಾರ್ಯದರ್ಶಿ ಹಬೀಬುಲ್ಲಾ ಹವಾಲ್ದಾರ್, ಜಿಪಂ ಸದಸ್ಯರಾದ ವೀರೇಶ್ ಕೊಟಗಿ, ಶಿವಲಿಂಗೇಗೌಡ, ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಎಪಿಎಂಸಿ ಅಧ್ಯಕ್ಷ ಜಯಶೀಲಪ್ಪ, ಬಸವಂತಪ್ಪ ಜಡೆ, ಸಂಜೀವ ಲಕ್ಕವಳ್ಳಿ, ಸದಾನಂದಗೌಡ ಬಿಳಗಲಿ, ರೇವಣಪ್ಪ, ರಫೀಕ್ ಆಹ್ಮದ್ ಪಟೇಲ್, ಉದಯಕುಮಾರ್, ಪರಶುರಾಮ ಸೇರಿದಂತೆ ಮತ್ತಿತರರಿದ್ದರು.

ಜಾಹಿರಾತು

LEAVE A REPLY

Please enter your comment!
Please enter your name here