ಕಾಡಾನೆ ದಾಳಿಯಿಂದ ಕೂದಳೆಲೆ ಅಂತರದಲ್ಲಿ ಪಾರಾದ ಬೈಕ್ ಸವಾರ !

0
289

ಮೂಡಿಗೆರೆ: ಬೈಕಿನಲ್ಲಿ ತೆರಳುವ ವೇಳೆ ಕಾಡಾನೆ ದಿಢೀರನೆ ದಾಳಿಯಿಂದ ವ್ಯಕ್ತಿಯೋರ್ವ ಕೂದಳೆಲೆ ಅಂತರದಲ್ಲಿ ಪಾರಾದ ಘಟನೆ ತಾಲ್ಲೂಕಿನ ಊರುಬಗೆ ಗ್ರಾಮದಲ್ಲಿ ನಡೆದಿದೆ.

ಪ್ರಭಾಕರ್ ಕಾಡಾನೆ ದಾಳಿ ವೇಳೆ ಬೈಕ್ ಬಿಟ್ಟು ಪ್ರಾಣ ಉಳಿಸಿಕೊಂಡ ವ್ಯಕ್ತಿ. ಈ ದಾಳಿಯಿಂದ ಬೈಕ್ ಸಂಪೂರ್ಣ ಜಖಂ ಆಗಿದ್ದು, ಸತ್ತಿಗನಹಳ್ಳಿ ಗ್ರಾಮದ ಪ್ರಭಾಕರ್ ಎಂಬುವರಿಗೆ ಕೈ, ಕಾಲಿಗೆ ಗಾಯವಾಗಿದ್ದು ಗಾಯಾಳು ಪ್ರಭಾಕರ್ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಅತಿಯಾದ್ದು, ಈ ಕಾಡಾನೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರ ಆಗ್ರಹಿಸಿದಾರೆ.

ಜಾಹಿರಾತು

LEAVE A REPLY

Please enter your comment!
Please enter your name here