ಕಾಫಿನಾಡಿನಲ್ಲಿ ಒಕ್ಕೂಟ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

0
315

ಚಿಕ್ಕಮಗಳೂರು: ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ಮಸೂದೆಯನ್ನು ವಿರೋಧಿಸಿ ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಯಿತು.

ಬಂದ್ ಕರೆಗೆ ನಿರೀಕ್ಷಿತ ಯಶಸ್ಸು ದೊರೆಯಲಿಲ್ಲ. ವಿವಿಧ ಪಕ್ಷ ಸಂಘಟನೆಗಳ ಮುಖಂಡರು ರಸ್ತೆಗಳಲ್ಲಿ ತೆರಳಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕಿಸಬೇಕಾಯಿತು.

ಜಿಲ್ಲಾ ಕೇಂದ್ರದಲ್ಲಿ ಬೆಳಗಿನಿಂದಲೇ ಪ್ರತಿಭಟನೆಯ ಧ್ವನಿ ಮೊಳಗಿತು. ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾನವ ಸರಪಳಿ ರಚಿಸಲಾಯಿತು. ಅಲ್ಲಿಂದ ಆಜಾದ್ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆಯನ್ನು ಮಾಡಿದರು.

ಮಹಾತ್ಮ ಗಾಂಧಿ ರಸ್ತೆಯಲ್ಲಿ ಕೆಲಕಾಲ ವಾಹನ ಜನಸಂಚಾರವಿಲ್ಲದೆ ಬಿಕೋ ಅನ್ನುತ್ತಿತ್ತು. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದವು.

ಮಹಾತ್ಮ ಗಾಂಧಿ ರಸ್ತೆಯಲ್ಲಿ ಕೆಲಕಾಲ ವಾಹನ ಜನಸಂಚಾರವಿಲ್ಲದೆ ಬಿಕೋ ಅನ್ನುತ್ತಿತ್ತು. ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದ್ದವು. ಪ್ರತಿಭಟನೆ ಜೊತೆಗೆ ಆಜಾದ್ ಮೈದಾನದಲ್ಲಿ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಿಸಲಾಯಿತು.

ಎಚ್. ಎಂ. ರೇಣುಕಾರಾಧ್ಯ, ಎಚ್. ಎಚ್ .ದೇವರಾಜ್, ಬಿ. ಅಮ್ಜದ್, ರವೀಶ್ ಬಸಪ್ಪ, ಗುರುಶಾಂತಪ್ಪ ತೇಗೂರು ಜಗದೀಶ್, ಕೂದುವಳ್ಳಿ ಮಂಜುನಾಥ್ ಮಾತನಾಡಿ ಕೇಂದ್ರ ಜಾರಿಗೆ ತಂದಿರುವ ಕಾಯಿದೆಗಳಿಂದ ಆಗುವ ದುಷ್ಪರಿಣಾಮಗಳನ್ನು ತೆರೆದಿಟ್ಟರು.

ದೆಹಲಿಯಲ್ಲಿ 10 ತಿಂಗಳಿನಿಂದ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಜನಸಾಮಾನ್ಯರ ಧ್ವನಿಗೆ ಮನ್ನಣೆ ನೀಡದಿರುವುದು ಖಂಡನೆಗೆ ಒಳಗಾಯಿತು.

ಖಾಸಗಿ ಹಾಗೂ ಕಾರ್ಪೊರೇಟ್ ವಲಯಕ್ಕೆ ಸರ್ಕಾರ ಮಣೆ ಹಾಕುತ್ತಿದ್ದು ರೈತರು ಬೀದಿಗೆ ಬಿದ್ದಿದ್ದಾರೆ ಎನ್ನುವ ಆತಂಕ ವ್ಯಕ್ತಪಡಿಸಿ ಪ್ರಧಾನಿ ಮೋದಿ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಟೀಕಿಸಿದರು.

ಜಾಹಿರಾತು

LEAVE A REPLY

Please enter your comment!
Please enter your name here