Home Crime News ಕಾಲೇಜು ವಿದ್ಯಾರ್ಥಿನಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ಯುವಕನ ಬಂಧನ
ಎನ್.ಆರ್.ಪುರ: ಕಾಲೇಜು ವಿದ್ಯಾರ್ಥಿನಿಯನ್ನು ಮದುವೆಯಾಗುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ತಾಲೂಕಿನ ಜಯಪುರ ಸಮೀಪದ ಎಲೆಮಡಲಿನ ಬಿ.ಎಚ್.ಮಂಜುನಾಥ್ ಎಂಬ ವ್ಯಕ್ತಿಯನ್ನು ಜಯಪುರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಜುನಾಥ್ ಮೊಬೈಲ್ ಫೋನ್ ಕರೆ ಮಾಡಿ ಮದುವೆಯಾಗುವಂತೆ ಪೀಡಿಸುತ್ತಿದ್ದ. ಮದುವೆಯಾಗಲು ಒಪ್ಪದಿದ್ದಲ್ಲಿ ತಂದೆ, ತಾಯಿ, ತಂಗಿಯನ್ನು ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ. ದ್ವಿತೀಯ ಪಿಯುಸಿ ಓದುತ್ತಿರುವ ಸಹೋದರಿಯ ಕಾಲೇಜು ಬಳಿ ತೆರಳಿ ಬೆದರಿಕೆ ಒಡ್ಡಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.
Related