ಶಿಕಾರಿಪುರ: ಇಲ್ಲಿನ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ.
ಶ್ರೀ ಮ.ನಿ.ಪ್ರ. ರೇವಣಸಿದ್ದ ಸ್ವಾಮೀಜಿ ಅವರನ್ನು ಭಕ್ತರು ನಡೆದಾಡುದ ದೇವರು ಎಂದು ಪೂಜಿಸುತ್ತಿದ್ದರು. ವೀರಶೈವ ಮಹಾಸಭಾದ ಸ್ಥಾಪಕರಲ್ಲಿ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಪ್ರಮುಖ ರೂವಾರಿಗಳಾಗಿದ್ದರು.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ಜನಸಿದ್ದ ಸ್ವಾಮೀಜಿ ಅವರು, ಬಾಲ್ಯದಲ್ಲೇ ಸನ್ಯಾಸತ್ವ ಸ್ವೀಕರಿಸಿದರು. ಧರ್ಮ ಪ್ರಚಾರಕ್ಕಾಗಿ ಮಲೆನಾಡು ಭಾಗಕ್ಕೆ ಆಗಮಿಸಿದರು.
ಭಕ್ತರ ಅಪೇಕ್ಷೆಯಂತೆ ಕುಮದ್ವತಿ ಮತ್ತು ವೃಷಭಾವತಿ ನದಿಗಳ ಸಂಗಮ ಸ್ಥಳದಲ್ಲಿ ಶಿವಯೋಗ ಮಂದಿರ ಸ್ಥಾಪಿಸಿದರು. 1977ರ ಫೆಬ್ರವರಿ 1ರಂದು ಪಟ್ಟಾಭಿಷೇಕ ವಹಿಸಿಕೊಂಡು ಅವರು ಸುಮಾರು 44 ವರ್ಷ ಮಠವನ್ನು ಮುನ್ನಡೆಸಿದ್ದರು.
ಸಂತಾಪ:
ಶಿಕಾರಿಪುರ ತಾಲೂಕು ಕಾಳೇನಹಳ್ಳಿಯ ರೇವಣಸಿದ್ಧ ಮಹಾಸ್ವಾಮಿಗಳ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಿಜಾಪುರ ಜಿಲ್ಲೆ ಬಸವನಬಾಗೇವಾಡಿಯಲ್ಲಿ ಜನಿಸಿದ ಸ್ವಾಮೀಜಿ ಅವರು ಬಾಲ್ಯಾವಸ್ಥೆಯಲ್ಲಿಯೇ ಸನ್ಯಾಸ ಸ್ವೀಕರಿಸಿ, ಆಧ್ಯಾತ್ಮಿಕ ಉನ್ನತಿ ಸಾಧಿಸಿದ್ದರು. ಅವರು ತಮ್ಮ ಸಮಾಜಮುಖಿ ಚಿಂತನೆಗಳ ಮೂಲಕ ಎಲ್ಲರಿಗೂ ಮಾರ್ಗದರ್ಶಕರಾಗಿದ್ದರು. ಎಲ್ಲಾ ಧರ್ಮದವರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಸ್ವಾಮೀಜಿ ಅವರ ನಿಧನದಿಂದ ನಾವು ಹಿರಿಯ ಆಧ್ಯಾತ್ಮಿಕ ಚೇತನವನ್ನು ಕಳೆದುಕೊಂಡಿದ್ದೇವೆ.
ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಅವರು ತಮ್ಮ ಶೇಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
Related