ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿ ಮೂಲಸೌಕರ್ಯ ಇಲ್ಲದೆ ಬಡ ಕುಟುಂಬಗಳ ರೋಧನ

0
402

ಶೃಂಗೇರಿ: ನೆಮ್ಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನದ ಒಳಗೆ ಇರುವ ಮಲ್ನಾಡು ಗ್ರಾಮದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿರುವ 50ಕ್ಕೂ ಹೆಚ್ಚು ಕುಟುಂಬಗಳು ಮೂಲಸೌಕರ್ಯವಿಲ್ಲದೆ ದಿನ ಕಳೆಯುತ್ತಿವೆ.

ಮಲ್ನಾಡು ಗ್ರಾಮದ ಕಚಿಗೆ, ಹೊಸಿರು ಹಡ್ಲು, ಮುಂಡೋಡಿ, ಮೀನಗರಡಿ, ಒಳಲೆ ಮಾವಿನಕಾಡು, ಹಂಚಿನಕೊಡಿಗೆ ಮುಂತಾದ ಪ್ರದೇಶಗಳಲ್ಲಿ ಬಡ ಕುಟುಂಬಗಳು ವಾಸವಾಗಿವೆ. ವಿದ್ಯುತ್‌ ಸೌಕರ್ಯದಿಂದಲೂ ವಂಚಿತರಾಗಿರುವ ಕುಟುಂಬಗಳು ಕತ್ತಲಿನಲ್ಲಿ ಚಿಮಣಿ ದೀಪದಡಿ ಕಾಲ ಕಳೆಯುತ್ತಿವೆ.

ಇಲ್ಲಿರುವ 50ಕ್ಕೂ ಹೆಚ್ಚು ಕುಟುಂಬಗಳಿಗೆ ವಿದ್ಯುತ್ ಸಂಪರ್ಕವಿಲ್ಲ. ಲಾಕ್‍ಡೌನ್‍ನಲ್ಲಿ ಅತ್ತ ವಿದ್ಯುತ್ ಸಂಪರ್ಕವಿಲ್ಲದೆ, ಇತ್ತ ಮೊಬೈಲ್‌ ನೆಟ್‍ವರ್ಕ್ ಇಲ್ಲದೆ ಮಕ್ಕಳ ಆನ್‌ಲೈನ್‌ ಶಿಕ್ಷಣಕ್ಕೆ ಸಮಸ್ಯೆಯಾಗಿತ್ತು. ಪ್ರಸ್ತುತ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಟ್ಟಣದ ಹಾಸ್ಟೆಲ್‍ನಲ್ಲಿ ಇದ್ದು ಕಲಿಯುತ್ತಿದ್ದಾರೆ.

ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಗೆ ಬರುವ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ಮಾಡಲು ಅವಕಾಶವಿದೆ ಎಂದು ಸಂಬಂಧಪಟ್ಟ ಇಲಾಖೆ ಹೇಳುತ್ತಿದೆ. ಕಾಂಕ್ರೀಟ್ ರಸ್ತೆಗೆ ಬೇಕಾಗುವ ಲಕ್ಷಗಟ್ಟಲೆ ಹಣ ಸರ್ಕಾರ ನೀಡಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಿ ಎಂದು ಇತ್ತೀಚೆಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here