ತೀರ್ಥಹಳ್ಳಿ : ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಸಂಗೀತ ನಿರ್ದೇಶಕ ಹಂಸಲೇಖ ಚಾಲನೆ ನೀಡಿದರು.
ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ನಡೆಯುವ ಪಾದಯಾತ್ರೆಗೆ ಹಂಸಲೇಖ ಚಾಲನೆ ಕೊಟ್ಟರು
ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಹಂಸಲೇಖ ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ ಎಂದರೆ ಆಡಳಿತ ಹಾಗೂ ವಿರೋಧ ಪಕ್ಷದವರು ಒಂದಾಗುತ್ತಾರೆ. ಹಿಂದೆ ನಾವು ಗೋಕಾಕ್ ಚಳವಳಿ ನಡೆಸಿದ್ದೆವು. ಈಗ ಕುಪ್ಪಳಿ ಹೋರಾಟ ಆರಂಭಿಸಿದ್ದೇವೆ. ಇಂದು ಕುಪ್ಪಳಿ ಕಹಳೆ ಊದಿದ್ದೇವೆ ಎಂದರು.
ವರದಿ : ಅಕ್ಷಯ್ ಕುಮಾರ್
Related