ಕೃಷಿ ಜಮೀನಿಗೆ ಅಕ್ರಮವಾಗಿ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು !

0
2984

ತರೀಕೆರೆ: ಕೃಷಿ ಜಮೀನಿಗೆ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಗಂಡಾನೆಯೊಂದು ಮೃತಪಟ್ಟಿದೆ.

ಭದ್ರಾವತಿ ಪ್ರಾದೇಶಿಕ ಅರಣ್ಯ ವಿಭಾಗಕ್ಕೆ ಒಳಪಡುವ, ತರೀಕೆರೆ ವಲಯದ ಲಿಂಗದಹಳ್ಳಿ ಸೆಕ್ಷನ್ ವ್ಯಾಪ್ತಿಯ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಗಂಡು ಆನೆ ಅಕ್ರಮ ವಿದ್ಯುತ್ ಗೆ ಬಲಿಯಾಗಿರುವುದರಿಂದ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಆನೆಗಳು ಅಕ್ರಮ ವಿದ್ಯುತ್ ಗೆ ಬಲಿಯಾಗುತ್ತಲೇ ಇವೆ. ಜಮೀನಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸುವವರ ವಿರುದ್ಧ ಕಠಿಣ ಕಾನೂನು ಜಾರಿ ಮಾಡದೇ ಇರುವುದೇ ಇಂಥ ದುರಂತಗಳಿಗೆ ಕಾರಣವಾಗಿದೆ.

ಇಂತಹ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿರುವವರನ್ನು ತಕ್ಷಣ ಕಾರ್ಯಚರಣೆ ನಡೆಸಿ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here