ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು !

0
8291

ಭದ್ರಾವತಿ: ತಾಲೂಕಿನ ಮಾಚೇನಹಳ್ಳಿ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತರನ್ನು ಭದ್ರಾವತಿ ತಾಲೂಕಿನ ಜಯಂತಿನಗರ ಗ್ರಾಮದ ಮಂಜುನಾಥ್ (28) ಮತ್ತು ಅಂತೋನಿ (35) ಎಂದು ಗುರುತಿಸಲಾಗಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಈ ಘಟನೆ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಭದ್ರಾವತಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here