ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕ ನೀರಿನಲ್ಲಿ ಮುಳುಗಿ ಸಾವು !

0
514

ಸೊರಬ: ಕೆರೆಯಲ್ಲಿ ಎತ್ತುಗಳ ಮೈತೊಳೆಯಲು ಹೋಗಿ ಯುವಕನೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಾಲೂಕಿನ ತವನಂದಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ತವನಂದಿ ಗ್ರಾಮದ ಪುಟ್ಟಪ್ಪ ಅವರ ಪುತ್ರ ಮಧುಸೂದನ್ (23) ಮೃತ ದುರ್ಧೈವಿಯಾಗಿದ್ದು, ಗ್ರಾಮದ ದೊಡ್ಡ ಕೆರೆಯಲ್ಲಿ ಎತ್ತುಗಳ ಮೈ ತೊಳೆಯುತ್ತಿದ್ದ ಸಂದರ್ಭದಲ್ಲಿ ಎತ್ತುಗಳು ನೀರಿಗೆ ಎಳೆದಿವೆ. ಈ ವೇಳೆ ಈಜು ಬಾರದೇ ಮಧುಸೂದನ್ ನೀರಿನಲ್ಲಿ ಮುಳುಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಠಾಣೆ ಸಿಬ್ಬಂದಿ ತೆರಳಿ ಸ್ಥಳೀಯರ ಸಹಕಾರದೊಂದಿಗೆ ಸತತ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.

ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here