ಸೊರಬ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪ ತನಿಖೆಯ ಹಾದಿಯಲ್ಲಿದ್ದು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಬಯಸುವುದಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಗುರುವಾರ ತಾಲೂಕಿನ ಉದ್ರಿ ಗ್ರಾಮದಲ್ಲಿ ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಗಂಭೀರ ಆರೋಪಕ್ಕೆ ವಿಪಕ್ಷಗಳು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಕುರಿತು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಸಚಿವರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಪಕ್ಷದ ವರಿಷ್ಠರು ಹಾಗೂ ರಾಜ್ಯದ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುವರು. ಆದರೆ, ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನುಣುಚಿಕೊಂಡರು.