ಕೈ ಕೊಟ್ಟ ಹುಡುಗಿ ; ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ !

0
1916

ಶಿವಮೊಗ್ಗ: ಹುಡುಗಿ ಕೈಕೊಟ್ಟಳು ಎಂಬ ಕಾರಣದಿಂದ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಫಾರ್ಮಸಿ ಮಾಡುತ್ತಿದ್ದ ವಿದ್ಯಾರ್ಥಿ ಹಾಗೂ ತಾಲೂಕಿನ ಬ್ಯಾಡನಾಳ ಗ್ರಾಮದ ವಿನಯ್ ಕುಮಾರ್ (21) ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ.

ಮಾ. 19ರಂದು ಕಳೆನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನಲೆ:

ಶಿವಮೊಗ್ಗ ನಗರದ ಖಾಸಗಿ ಕಾಲೇಜಿನ ಓದುತ್ತಿದ್ದ ಯುವಕ, ಯುವತಿ ಕಳೆದ ಐದಾರು ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಯುವತಿ ಬೇರೆ ಯುವಕನನ್ನು ಪ್ರೀತಿಸುತ್ತಿರುವ ವಿಷಯ ತಿಳಿದ ವಿನಯ್‌ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಜಾಹಿರಾತು

LEAVE A REPLY

Please enter your comment!
Please enter your name here