ಕೊನೆಗೂ ತೀರ್ಥಹಳ್ಳಿ ಪಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಗೆ ಮುಹೂರ್ತ ಫಿಕ್ಸ್ !

0
471

ತೀರ್ಥಹಳ್ಳಿ : ಇಲ್ಲಿನ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ.

ಅಕ್ಟೋಬರ್ 28 ಕ್ಕೆ ಚುನಾವಣೆ ನಿಗದಿಯಾಗಿದ್ದು ಸಮಯದಲ್ಲಿ ಬದಲಾವಣೆ ಆಗುವ ನಿರೀಕ್ಷೆ ಇರುವುದರಿಂದ ಸಮಯವನ್ನು ನಿಗದಿಪಡಿಸಿಲ್ಲ.

ಇನ್ನು ತೀರ್ಥಹಳ್ಳಿ ಪಟ್ಟಣ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರ ಬಲ ಇದ್ದು ಅದರಲ್ಲಿ ಕಾಂಗ್ರೆಸ್‌ನ 9 ಹಾಗೂ ಬಿಜೆಪಿಯ 6 ಸದಸ್ಯರು ಗೆಲುವು ಕಂಡಿದ್ದಾರೆ.

ಬಿಜೆಪಿ ಪರವಾಗಿ ಶಾಸಕರು ಹಾಗೂ ಸಂಸದರು ಮತ ಚಲಾಯಿಸುವ ಅವಕಾಶ ಹೊಂದಿದ್ದು ಆಗ ಬಿಜೆಪಿಯ ಸದಸ್ಯ ಬಲ 8 ಆಗುತ್ತದೆ.

ಇನ್ನು ತೀರ್ಥಹಳ್ಳಿಯಾದ್ಯಂತ ಆಪರೇಷನ್ ಕಮಲ ಮಾಡುವ ಬಗ್ಗೆ ಗುಸುಗುಸು ಹಬ್ಬುತ್ತಿದ್ದು ಈ ಕಾರಣಕ್ಕಾಗಿ ಕಾಂಗ್ರೆಸ್‌ನ ಜನಪ್ರತಿನಿಧಿಗಳು ದೇವಸ್ಥಾನಗಳಿಗೆ ಪ್ರವಾಸ ಕೈಗೊಂಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.

ಒಟ್ಟಿನಲ್ಲಿ ಅಕ್ಟೋಬರ್ 28 ಕ್ಕೆ ನೆಡೆಯುವ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ಜಾಹಿರಾತು

LEAVE A REPLY

Please enter your comment!
Please enter your name here