ಕೊರೊನಾ 3ನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಬಲಿ !

0
749

ಶಿವಮೊಗ್ಗ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಕೊರೊನಾ 3ನೇ ಅಲೆ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ.

ಇಂದು ಜಿಲ್ಲೆಯಲ್ಲಿ 260 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1611 ಕ್ಕೇರಿದೆ.

ತಾಲೂಕುವಾರು ಇಂದಿನ ಸೋಂಕಿತರ ವಿವರ :

ಶಿವಮೊಗ್ಗ 131

ಭದ್ರಾವತಿ 48

ತೀರ್ಥಹಳ್ಳಿ 17

ಶಿಕಾರಿಪುರ 17

ಸಾಗರ 26

ಹೊಸನಗರ 05

ಸೊರಬ 04

ಇತರೆ ಜಿಲ್ಲೆ 12

ಇಂದು 2587 ಜನರಿಗೆ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, 2455 ಜನರಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದೆ. 277 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. 40 ಜನರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕೋವಿಡ್ ಆಸ್ಪತ್ರೆಯಲ್ಲಿ 55 ಮಂದಿ, 1467 ಜನರು ಮನೆಯಲ್ಲಿಯೇ ಐಸೋಲೇಷನ್ ಆಗಿದ್ದಾರೆ. 19 ಮಂದಿ ಟ್ರಿಯಾಜ್ ಸೆಂಟರ್‌ಗಳಲಿದ್ದಾರೆ.

ಇದುವರೆಗೆ ಜಿಲ್ಲೆಯಲ್ಲಿ 1073 ಜನರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಜಾಹಿರಾತು

LEAVE A REPLY

Please enter your comment!
Please enter your name here