24.3 C
Shimoga
Friday, December 9, 2022

ಕೊಲೆ ಆರೋಪಿ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ; ಆರೋಪಿ ಕಾಲಿಗೆ ಗಂಡೇಟು !

ಶಿವಮೊಗ್ಗ: ಶಿವಮೊಗ್ಗದ ವೆಂಕಟೇಶನಗರ ಬಡಾವಣೆ ಅನಕೃ ರಸ್ತೆಯಲ್ಲಿ ನಡೆದ ಖಾಸಗಿ ಆಸ್ಪತ್ರೆಯೊಂದರ ಮ್ಯಾನೇಜರ್ ವಿಜಯ್ (37) ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಜಬಿ (23) ಎಂಬಾತನನ್ನು ಮಹಜರ್ ಗೆಂದು ಗಾಡಿಕೊಪ್ಪದ ತುಂಗಾ ಚಾನಲ್ ಬಳಿ ಕರೆದೊಯ್ದ ವೇಳೆ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ಹರೀಶ್ ಪಾಟೀಲ್ ಅವರು ಆರೋಪಿ ಜಬಿ ಕಾಲಿಗೆ ಗುಂಡಿಕ್ಕಿ ವಶಕ್ಕೆ ಪಡೆದ ಘಟನೆ ನಡೆದಿದೆ.

ದಾಳಿಯಲ್ಲಿ ಗಾಯಗೊಂಡ ಪೊಲೀಸ್ ಪೇದೆ ರೋಷನ್ ಹಾಗೂ ಆರೋಪಿ ಜಬಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ (21) ಹಾಗೂ ಕಾರ್ತಿಕ್ (21) ಎಂಬುವರನ್ನು ಬಂಧಿಸಲಾಗಿದೆ. ಬಂಧಿಸಲಾಗಿರುವ ಮೂವರು ಆರೋಪಿಗಳು, ಈ ಹಿಂದೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದರು. ಜಬಿ ವಿರುದ್ದ ಡಕಾಯಿತಿ ಸೇರಿದಂತೆ 11 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಅವರು ತಿಳಿಸಿದ್ದಾರೆ.

ಅ.25 ರ ಮಂಗಳವಾರ ಮುಂಜಾನೆ ಮನೆ ಮುಂಭಾಗದಲ್ಲಿಯೇ ವಿಜಯ್ ಅವರ ಚಿನ್ನದ ಸರ ಕಿತ್ತುಕೊಳ್ಳಲು ಆರೋಪಿಗಳು ಮುಂದಾಗಿದ್ದರು. ಈ ವೇಳೆ ವಿಜಯ್ ಅವರ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

- Advertisement -

More articles

LEAVE A REPLY

Please enter your comment!
Please enter your name here

- Advertisement -

Latest article

error: Content is protected !!